ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ
Appeal to Tehsildar from All India Bahujan Samaj Party
ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ
ಮುಂಡರಗಿ 15: ಪಟ್ಟಣದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಮುಂಡರಗಿ : ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘ ಹಾಗೂ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿ ಆಶ್ರಯದಲ್ಲಿ ಇಂದು ಜ.15 ರಂದು ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂಡರಗಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿ ಗದಗ ಜಿಲ್ಲಾಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ಬೆಳೆದ ಉತಪನ್ನಗಳು ಬರುತ್ತಿದ್ದು, ರೈತರ ಸರಕು ಸಾಗಾಟಕ್ಕೆ ಮುಂಡರಗಿ ಮಾರ್ಗವಾಗಿ, ಗದಗ-ಹರಪನಹಳ್ಳಿ ರೈಲ್ವೆ ಮಾರ್ಗವನ್ನು ಮತ್ತು ಕೊಪ್ಪಳ-ಮುಂಡರಗಿ-ಶಿಗ್ಗಾಂವಿ ಹೆದ್ದಾರಿಗಳನ್ನು ಅನುಷ್ಠಾನಗೊಳಿಸಲು ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜ.20ರಂದು ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗುವುದು. ಹೀಗಾಗಿ ಈ ಹೋರಾಟಕ್ಕಾಗಿ ಜ.19 ರಂದು ಗದಗ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಹೋರಾಟದ ಮನವಿ ಪತ್ರವನ್ನು ಇಂದು ಮುಂಡರಗಿ ತಹಶೀಲ್ದಾರ್‌ರವರಿಗೆ ಸಲ್ಲಿಸಲಾಯಿತು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಿವಯ್ಯ ಶಶಿಮಠ, ನಿಂಗಪ್ಪ ಭಂಡಾರಿ, ಹೇಮನಗೌಡ ಪಾಟೀಲ, ಚಂದ್ರ್ಪ ಬಳ್ಳಾರಿ, ಪರಶುರಾಮ ಜುಟ್ಲಣ್ಣವರ, ದೇವಪ್ಪ ಮುಕ್ತುಂಪುರ, ಅಂದಪ್ಪ ಹಿರೇವಡ್ಡಟ್ಟಿ, ಬಸವರಾಜ ಅಗ್ಗದ ಮುಂತಾದವರು ಉಪಸ್ಥಿತರಿದ್ದರು ಎಂದು ತಿಳಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 