ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ

Appeal to Tehsildar from All India Bahujan Samaj Party

ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ 

 ಮುಂಡರಗಿ 15:  ಪಟ್ಟಣದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. 

ಮುಂಡರಗಿ : ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘ ಹಾಗೂ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿ ಆಶ್ರಯದಲ್ಲಿ ಇಂದು ಜ.15 ರಂದು ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂಡರಗಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಲಾಯಿತು. 

ಈ ವೇಳೆ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿ ಗದಗ ಜಿಲ್ಲಾಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ಬೆಳೆದ ಉತಪನ್ನಗಳು ಬರುತ್ತಿದ್ದು, ರೈತರ ಸರಕು ಸಾಗಾಟಕ್ಕೆ ಮುಂಡರಗಿ ಮಾರ್ಗವಾಗಿ, ಗದಗ-ಹರಪನಹಳ್ಳಿ ರೈಲ್ವೆ ಮಾರ್ಗವನ್ನು ಮತ್ತು ಕೊಪ್ಪಳ-ಮುಂಡರಗಿ-ಶಿಗ್ಗಾಂವಿ ಹೆದ್ದಾರಿಗಳನ್ನು ಅನುಷ್ಠಾನಗೊಳಿಸಲು ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜ.20ರಂದು ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಗುವುದು. ಹೀಗಾಗಿ ಈ ಹೋರಾಟಕ್ಕಾಗಿ ಜ.19 ರಂದು ಗದಗ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಹೋರಾಟದ ಮನವಿ ಪತ್ರವನ್ನು ಇಂದು ಮುಂಡರಗಿ ತಹಶೀಲ್ದಾರ್‌ರವರಿಗೆ ಸಲ್ಲಿಸಲಾಯಿತು ಎಂದು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಶಿವಯ್ಯ ಶಶಿಮಠ, ನಿಂಗಪ್ಪ ಭಂಡಾರಿ, ಹೇಮನಗೌಡ ಪಾಟೀಲ, ಚಂದ್ರ​‍್ಪ ಬಳ್ಳಾರಿ, ಪರಶುರಾಮ ಜುಟ್ಲಣ್ಣವರ, ದೇವಪ್ಪ ಮುಕ್ತುಂಪುರ, ಅಂದಪ್ಪ ಹಿರೇವಡ್ಡಟ್ಟಿ, ಬಸವರಾಜ ಅಗ್ಗದ ಮುಂತಾದವರು ಉಪಸ್ಥಿತರಿದ್ದರು ಎಂದು ತಿಳಿಸಿದರು.