ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ
Appeal to Tehsildars demanding withdrawal of hate speech bill
ರಾಯಬಾಗ 24: ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ಬುಧವಾರ ಬಿಜೆಪಿ ಶಾಸಕ ಡಿ.ಎಮ್.ಐಹೊಳೆಯವರ ನೇತೃತ್ವದಲ್ಲಿ ತಹಸೀಲ್ದಾರ ಮಹಾದೇವ ಸನಮುರಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಶಾಸಕರು, ದ್ವೇಷ ಭಾಷಣ ಮಸೂದೆ ಕುರಿತು ವಿಧಾನ ಸಭೆಯಲ್ಲಿ ಚರ್ಚಿಸಲು ಸರಿಯಾಗಿ ಅವಕಾಶ ನೀಡದೆ,
ತರಾತುರಿಯಲ್ಲಿ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ. ಎಮರ್ಜೆನ್ಸಿ ಜಾರಿಗೆ ತಂದ ಕಾಂಗ್ರೆಸ್ ಈಗ ಮತ್ತೊಂದು ಬಾರಿ ಅಂತಹದೇ ಪ್ರಯತ್ನಕ್ಕೆ ಮುಂದಾಗಿದೆ. ಈ ಬಿಲ್ ಅಂಗೀಕರಿಸಿರುವುದು ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದರು.ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಬಸವರಾಜ ದೋಣವಾಡೆ, ಸಂಗಣ್ಣ ದತ್ತವಾಡೆ, ಮಹೇಶ ಕರಮಡಿ, ರಂಜಾನ ಮಕಾನದಾರ, ಬೋಲಾ ಕಡಾಳೆ, ಸುಭಾಷ ಕಾಂಬಳೆ, ಭಾರತಿ ಲೋಹಾರ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 