ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ
Appeal to fulfill various demands of outsourced employees working in government hostels and residen
ವಿಜಯನಗರ 21 : ಕರ್ನಾಟಕ ರಾಜ್ಯ ಸರ್ಕಾರದ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ) ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಿಂದ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಜವಾನರು, ನರ್ಸ್‌ಗಳು ಮುಂತಾದ “ಡಿ” ಗ್ರೂಪ್ ನೌಕರರು ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಕಾನೂನು ಪ್ರಕಾರ ಸಿಗಬೇಕಾಗಿದ್ದ ಸೌಲಭ್ಯಗಳಿಗಾಗಿ ಹೊರಗುತ್ತಿಗೆ ನೌಕರರು ಕಳೆದ 15ವರ್ಷಗಳಿಂದ ಹೋರಾಟ ನಡೆಸಿ ಬೇಡಿಕೆಗಳನ್ನು ಸಲ್ಲಿಸುತ್ತಿದ್ದರೂ ಸಹ ನಮ್ಮ ನ್ಯಾಯ ಬದ್ಧ, ಕಾನೂನು ಬದ್ಧ ಸೌಲಭ್ಯಗಳನ್ನು ಈಡೇರಿಸುತ್ತಿಲ್ಲ. ಇಲ್ಲಿ ದುಡಿಯುತ್ತಿರುವ ನೌಕರರಲ್ಲಿ ಶೇಕಡ 90ಅ ರಷ್ಟು ಮಹಿಳೆಯರೇ ಇದ್ದಾರೆ. ಇವರಲ್ಲಿ ಕಡುಬಡವರು ಒಂಟಿ ಮಹಿಳೆಯರು, ವಿಧವೆಯರು, ಎಸ್.ಸಿ. ಎಸ್.ಟಿ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದಿಂದ ಬಂದವರೇ ಶೇಕಡ 95ಅ ರಷ್ಟು ಇರುವುದರನ್ನು ಗಮನಿಸಿ ರಾಜ್ಯ ಸರಕಾರ ಇವರುಗಳ ಬೇಡಿಕೆಗಳ ಕುರಿತು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಹಾಗೆಯೇ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಈ ದಿನ ದಿನಾಂಕ : 21.11.2025 ರಂದು ಹೊಸಪೇಟೆಯ ವಿಜಯನಗರ ಜಿಲ್ಲಾಧಿಕಾರಿಗಳ ಕಛೇರಿ ಹತ್ತಿರ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬೇಡಿಕೆಗಳು:
1) ದಿನಾಂಕ : 11.04.2025 ರಂದು ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ವೇತನ ಪರಿಷ್ಕರಣೆ ಮಾಡಿ ಕರಡು ಅಧಿಸೂಚನೆ (ನೋಟಿಫಿಕೇಷನ್) ಹೊರಡಿಸಿರುವ ಮಾಸಿಕ ಕನಿಷ್ಠ ವೇತನ ತಕ್ಷಣ ಜಾರಿ ಮಾಡಬೇಕು.
2) ಕನಿಷ್ಠ ವೇತನ ತಿಂಗಳಿಗೆ 36 ಸಾವಿರ ರೂಪಾಯಿ ನಿಗಧಿ ಮಾಡಿ ಜಾರಿಗೊಳಿಸಬೇಕು.
3) ಹೊರಗುತ್ತಿಗೆ ಪದ್ದತಿಯನ್ನು ರದ್ದುಮಾಡಿ ಸರಕಾರವೇ ನೇರವಾಗಿ ವೇತನ ಪಾವತಿ ಮಾಡಬೇಕು.
4) ವಯೋ ನಿವೃತ್ತಿ 60 ವರ್ಷಗಳ ವರೆಗೆ ಎಲ್ಲಾ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕೊಟ್ಟು ಖಾಯಂ ಮಾಡಬೇಕು.
5) ಕಾರ್ಮಿಕ ಇಲಾಖೆ ಕಾನೂನು ಪ್ರಕಾರ ಕಡ್ಡಾಯ ವಾರದ ರಜೆ, ಇ.ಎಸ್.ಐ. ಮತ್ತು ಐಡಿ ಕಾರ್ಡ್, ಪಿ.ಎಫ್. ತುಂಬಿದ ರಸೀದಿ, ವೇತನ ಚೀಟಿ, ಟೆಂಡರ್‌ದಾರರಿಂದ ಸರ್ವಿಸ್ ಸರ್ಟಿಫಿಕೇಟ್, ಆದೇಶ ಪತ್ರಕೊಡಬೇಕು.
6) ಬಿ.ಸಿ.ಎಂ. ಇಲಾಖೆಯ ಬಾಲಕರ ಹಾಸ್ಟೆಲ್‌ಗಳಿಗೆ ಈ ಮೊದಲಿನಂತೆ ರಾತ್ರಿ ಕಾವಲುಗಾರರನ್ನು ನೇಮಕ ಮಾಡಿ ವಿದ್ಯಾರ್ಥಿಗಳ ಸುರಕ್ಷತೆ ಕಾಪಾಡಬೇಕು.
7) ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ದಿನಾಂಕ : 17.04.2023ರ ಆದೇಶದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿದ್ದ ನೌಕರರನ್ನು ಕಡಿಮೆ ಮಾಡಬೇಕೆಂಬುದನ್ನು ತಕ್ಷಣ ವಾಪಸ್ಸು ಪಡೆದು, ಈ ಹಿಂದಿನಂತೆ ನೌಕರರ ಸಂಖ್ಯೆಯನ್ನು ಮುಂದುವರೆಸಬೇಕು.
8) ನೇರ ನೇಮಕಾತಿಯಲ್ಲಿ ಕೆಲಸ ಕಳೆದುಕೊಂಡ ಎಲ್ಲಾ ಹೊರಗುತ್ತಿಗೆ ನೌಕರರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು.
9) ತಮ್ಮ ಅಧ್ಯಕ್ಷತೆಯಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ಕರೆದು, ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು.
10) ಕನ್ನಡ ವಿಶ್ವವಿದ್ಯಾಲಯದಲ್ಲಿ ಕಳೆದ 15-20 ವರ್ಷಗಳಿಂದ ಹೊರಗುತ್ತಿಗೆಯಲ್ಲಿ ದುಡಿಯುತ್ತಿರುವ ಸೆಕ್ಯೂರಿಟಿಗಾರ್ಡ್ ಮತ್ತು ಸ್ವಚ್ಛತಾಗಾರರಿಗೆ, ರಾಜ್ಯ ಸರ್ಕಾರದಿಂದ ಅನುದಾನ ಬಂದಿಲ್ಲವೆಂಬ ಕಾರಣಕ್ಕೆ ಕಳೆದ 13 ತಿಂಗಳುಗಳ ಬಾಕಿ ವೇತನ ಪಾವತಿ ಮಾಡಿಲ್ಲ. ಹೊರಗುತ್ತಿಗೆ ನೌಕರರ ಸಂಕಷ್ಠದ ಬದುಕನ್ನು ಅರ್ಥ ಮಾಡಿಕೊಂಡು, ತಕ್ಷಣ ಅವಶ್ಯಕತೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 