ಪಿಯುಸಿ ವಿದ್ಯಾರ್ಥಿಗಳಿಗೆ “ಕನ್ನಡ ರತ್ನ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಹರಪನಹಳ್ಳಿ 08 : ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಕಳೆದ 27 ವರ್ಷಗಳಿಂದ ಸಮಾಜಿಕ ಮತ್ತು ಕನ್ನಡದ ಕೈಂಕರ್ಯಗಳನ್ನು ಮಾಡುತ್ತಾ ಬಂದಿದೆ, ಕನ್ನಡ ನಾಡು-ನುಡಿ ಬೆಳವಣಿಗೆ ಮತ್ತು ವಿದ್ಯಾರ್ಥಿಗಳಲ್ಲಿ ಕನ್ನಡದ ಅಭಿಮಾನ ಆಸಕ್ತಿ ಮೂಡಿಸುವ ಉದ್ದೇಶದಿಂದ 2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿ ಕನ್ನಡ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ “ಕನ್ನಡ ರತ್ನ” ಹಾಗೂ 95 ರಿಂದ 99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ “ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಗೆ ವಿಜಯನಗರ ಜಿಲ್ಲೆಯವರಿಗೆ ಮಾತ್ರ ಅವಕಾಶವಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ದಿನಾಂಕ 9-4-2025 ರಿಂದ 26-4-2025ರೊಳಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಅರ್ಜಿಯನ್ನು ಪಡೆಯುವ ಮತ್ತು ಸಲ್ಲಿಸುವ ವಿಳಾಸ ಹೆಚ್.ಮಲ್ಲಿಕಾರ್ಜುನ ಕನ್ನಡ ಉಪನ್ಯಾಸಕರು, ಗೊರವಿನ ತೋಟ, ಗ್ಯಾಸ್ ಏಜೆನ್ಸಿ ಹತ್ತಿರ, ಹರಪನಹಳ್ಳಿ. ಹೆಚ್ಚಿನ ಮಾಹಿತಿಗಾಗಿ, 6363240473 ಮತ್ತು 7899219343 ನವಜ್ಯೋತಿ ಸೌಹಾರ್ದ ಬ್ಯಾಂಕ್, ಬಸಮ್ಮ ನಿಲಯ, ವಿಜಯಲಕ್ಷ್ಮಿ ಗ್ಯಾಸ್ ಏಜೆನ್ಸಿ ಹತ್ತಿರ ಗೊರವಿನ ತೋಟ, ಹರಪನಹಳ್ಳಿ, ವಿಜಯನಗರ ಜಿಲ್ಲೆ.