ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿಗೆ ಆದೇಶ- ಸಚಿವ ಮಧು ಬಂಗಾರ್ಪ
Appointments ordered to address teacher shortage - Minister Madhu Bangarpa
ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿಗೆ ಆದೇಶ- ಸಚಿವ ಮಧು ಬಂಗಾರ್ಪ
ರಾಣೆಬೆನ್ನೂರ 16 ; ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13,500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರ್ಪ ಹೇಳಿದರು.
ರವಿವಾರ ಇಲ್ಲಿನ ಮೃತ್ಯುಂಯನಗರದ ಮೃತ್ಯುಂಜಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರಿ್ಡಸಿದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಣಾಳಿಕೆಯಲ್ಲಿ ಹೇಳಿದಂತೆ ಕೊಟ್ಟ ಮಾತಿನಂತೆ ಒಪಿಎಸ್ಯನ್ನು ಜಾರಿಗೆ ಮಾಡಲು ನಮ್ಮ ಸರ್ಕಾರ ಸಿದ್ದವಿದೆ. ನಾವು ಮರೆತಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಈಗಗಾಲೇ ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ನಡೆಸಲಾಗಿದೆ.
ಉಪಸಭಾಪತಿ ರುದ್ರ್ಪ ಲಮಾಣಿ ಮಾತನಾಡಿ, ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಬೇಡಿಕೆಗಳಲ್ಲಿ ನಾನು ಒಬ್ಬ ಫಲಾನುಭವಿಯಾಗಿದ್ದೇನೆ. ನಮ್ಮ ಸಂಸ್ಥೆಗಳ ಅನೇಕ ಹುದ್ದೆಗಳು ಖಾಲಿ ಇವೆ. ಅನೇಕ ವರ್ಷಗಳಿಂದ ಸಮಸ್ಯೆಗಳಿವೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅನುದಾನಿತ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ರಾಜ್ಯ ಘಟಕದ ಅಧ್ಯಕ್ಷ ಎನ್.ರಾಜಗೋಪಾಲ್, ಉಪನಿರ್ದೇಶಕ ಮೋಹನ ಎನ್. ದಂಡಿನ, ಟಯಟ್ ಪ್ರಾಚಾರ್ಯ ಝಡ್. ಎಂ. ಖಾಜಿ, ಟಿ. ರವಿಕುಮಾರ, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಾಮಸುಂದರ ಅಡಿಗ, ಎನ್.ಶ್ರೀಧರ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ನಲವಾಗಲ, ಮಾಲತೇಶ ಎಂ, ಚಂದ್ರಶೇಖರ ಗ್ಯಾನಗೌಡ್ರ, ಬಸವರಾಜ ನಾಯಕ, ಬಸವರಾಜ ಶ್ಯಾಮನೂರ, ಜ್ಯೋತಿ ಕೆ.ಎಸ್ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 