ಹನುಮಮಾಲ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು- ಜಿಲ್ಲಾಧಿಕಾರಿ
Appropriate arrangements will be made for devotees attending the Hanumamala program - District Coll
ಕೊಪ್ಪಳ 20: ಡಿಸೆಂಬರ್ 2 ಮತ್ತು 3 ರಂದು ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಗಳಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಅಂಜನಾದ್ರಿಗೆ ಭೇಟಿ ನೀಡಿ ಡಿಸೆಂಬರ್ 2 ಮತ್ತು 3 ರಂದು ನಡೆಯಲಿರುವ ಹನುಮಮಾಲ ಕಾರ್ಯಕ್ರಮದ ಪೂರ್ವಸಿದ್ದತೆಗಳ ಸ್ಥಳ ಪರೀಶೀಲನೆ ನಡೆಸಿದ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿ ಮಾತನಾಡಿದರು.
ಹನುಮಮಾಲ ಕಾರ್ಯಕ್ರಮಕ್ಕೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆಯಾಗಿ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸ್ಥಳ ಪರೀಶೀಲನೆ ನಡೆಸಲಾಗಿದೆ. ವಾಹನಗಳ ಪಾಕಿಂರ್ಗ್, ಬ್ಯಾರಿಕೇಡ್ ವ್ಯವಸ್ಥೆ, ಲೈಟಿಂಗ್, ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಕುಡಿಯುವ ನೀರು, ಹಾಗೂ ಸಿಸಿಟಿವಿ ಅಳವಡಿಕೆ ಸೇರಿದಂತೆ ಇತರೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದೆ ಎಂದರು.
ಹೋಮ, ಹವನ, ಅಲಂಕಾರ, ವಿಡಿಯೋ ಲೈವ್ ಸ್ಟ್ರೀಮಿಂಗ್, ಸ್ನಾನಘಟ್ಟ, ಶೌಚಾಲಯ ಮತ್ತು ಈ ಕೂಡಲೆ ಸ್ವಚ್ಚತೆ ಬಗ್ಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಸಂಸದರು. ಶಾಸಕರು ಒಳಗೊಂಡಂತೆ ಎಲ್ಲರ ಸಭೆ ಮಾಡಿ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ. ಅವರ ನಿರ್ದೇಶನದಂತೆ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು. ಈ ವರ್ಷ ಒಂದುವರೆ ಲಕ್ಷದಿಂದ ಎರಡು ಲಕ್ಷ ಜನರು ಸೇರುವ ನೀರೀಕ್ಷೆ ಇದ್ದು ಈ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಈ ತಿಂಗಳ 30 ನೇ ತಾರೀಖಿನ ಒಳಗಡೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಈಗಾಗಲೇ ಎಲ್ಲಾ ಕಡೆಯ ಪಾಕಿಂರ್ಗ್ ಸ್ಥಳಗಳಿಗೆ ಭೇಟಿ ನೀಡಲಾಗಿದೆ. ಸುಮಾರು 25 ಕಡೆ ಚೆಕಪೋಸ್ಟಗಳನ್ನು ಮಾಡಲಾಗುವುದು. ಪಾಕಿಂರ್ಗ್ ಸ್ಥಳ ಮತ್ತು ಊಟದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 15 ನೂರು ಜನ ಪೊಲೀಸರಿಗೆ ಈ ಕಾರ್ಯಕ್ರಮಕ್ಕೆ ನಿಯೋಜನೆ ಮಾಡಲಾಗುವುದು. ನಮ್ಮ ಪೊಲೀಸ್ ಇಲಾಖೆ ವತಿಯಿಂದ ಯಾವುದೇ ಸಮಸ್ಯೆಗಳಾಗದಂತೆ ಎಲ್ಲಾ ಕಡೆ ಸೆಕ್ಯೂರಿಟಿ ವ್ಯವಸ್ಥೆ ಮಾಡುವ ಮೂಲಕ ಹನುಮಮಾಲ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಪಂಚಾಯತ ವತಿಯಿಂದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೆಶನ ನೀಡಲಾಗಿದೆ. ವಿವಿಧ ಕಡೆಯಿಂದ ಬರುವ ಜನರಿಗೆ ಯಾವುದೇ ರಿತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಪಾಕಿಂರ್ಗ್ ಸ್ಥಳಗಳು. ಬ್ಯಾರಿಕೇಡ್ ವ್ಯವಸ್ಥೆ, ಕಂಟ್ರೋಲ್ ರೂಮ್, ಮೆಡಿಕಲ್ ಟೀಂ ನ ಸ್ಥಳ, ವೇದಪಾಠ ಶಾಲೆಯಲ್ಲಿ ಪ್ರಸಾದ ವಿತರಣೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಅಂಜನಾದ್ರಿ ಬೆಟ್ಟದ ತುದಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಆರ್. ಹೇಮಂತಕುಮಾರ್, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಕರ್ಣಕುಮಾರ ಹಾಗೂ ಕೊಪ್ಪಳ, ಗಂಗಾವತಿ ಹಾಗೂ ಕನಕಗಿರಿ ತಹಶಿಲ್ದಾರರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 