ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಹೋರಾಟಗಾರರನ್ನು ಬಂಧಿಸಿದ್ದು ಖಂಡನೀಯ: ರಹಿಮಾನಸಾಬ್

ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಹೋರಾಟಗಾರರನ್ನು ಬಂಧಿಸಿದ್ದು ಖಂಡನೀಯ: ರಹಿಮಾನಸಾಬ್ Arrest of activists for government medical college is condemnable: Rahimanasab


ದೇವರ ಹಿಪ್ಪರಗಿ 03:  ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ರಹಿಮಾನಸಾಬ್ ಕನಕಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು ಅವರು ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯನ್ನು ವಿರೋಧಿಸಿ ಇಂದಿಗೆ ಸುಮಾರು 108 ದಿನಗಳಾಯ್ತು ಅದೇ ರೀತಿ ಎರಡು ದಿನಗಳ ಹಿಂದೆ ಮಾನ್ಯ ವಿಜಯಪುರದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸುವುದಕ್ಕೆ ಹೋಗುವ ಸಂದರ್ಭದಲ್ಲಿ ಒಬ್ಬ ಸ್ವಾಮೀಜಿ ಹಾಗೂ ಇನ್ನುಳಿದ ಐದು ಜನ ಹೋರಾಟಗಾರರನ್ನು ಬಂಧಿಸಿದ್ದು ಖಂಡನೀಯ ಎಂದು ತಿಳಿಸಿದರು ಅದೇ ರೀತಿ ಈ ಆರು ಜನ ಹೋರಾಟಗಾರರನ್ನು ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಒಂದು ವೇಳೆ ಇದೇ ರೀತಿ ಹೋರಾಟಗಾರರ ಮೇಲೆ ಕೇಸ್ ಗಳನ್ನು ದಾಖಲಿಸುವುದಾಗಲಿ ಈ ಹೋರಾಟವನ್ನು ಹತ್ತಿಕ್ಕುವ ಕೆಲಸವಾಗಲಿ ಯಾವುದೇ ರಾಜಕಾರಣಿಗಳು ಹಾಗೂ ಸರ್ಕಾರ ಮುಂದಾದರೆ ಎಲ್ಲಾ ವಿವಿಧ ಸಂಘಟನೆಗಳ ಮುಖಾಂತರ ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವ ಅನಿವಾರ್ಯ ಆಗಬೇಕಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕ ಉಪಾಧ್ಯಕ್ಷರಾದ ನಾಗೇಶ್ ಕಮತಗಿ ಪ್ರಧಾನ ಕಾರ್ಯದರ್ಶಿಯಾದ ಅಶೋಕ್ ಗೊಲ್ಲರ್ ದೀಲೀಪ್ ದೊಡ್ಡಮನಿ ಸಂತೋಷ್ ರಾಥೋಡ್ ಹಾಗೂ ಕರವೇ ತಾಲೂಕ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.