ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಅಶೋಕ ಅಣ್ಣಿಗೇರಿ ನೇಮಕ
Ashok Annigeri appointed as Vice President of Karnataka State High School Co-Teachers Association
ಬೆಳಗಾವಿ 21: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ 2025-27ನೇ ಸಾಲಿಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ, ರಾಜ್ಯ ಉಪಾಧ್ಯಕ್ಷರಾಗಿ ಅಶೋಕ ಅಣ್ಣಿಗೇರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ರಾಜ್ಯ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಜರುಗಿದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ರಾಜ್ಯಾಧ್ಯಕ್ಷ ರಾದ ಬಿ. ಸಿದ್ದಬಸಪ್ಪ ಹಾಗೂ ಸಂಘದ ಪ್ರದಾನ ಕಾರ್ಯದರ್ಶಿ ದೇವೆರಾಜೇಗೌಡ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಗೊಲ್ಲಾಳಿ ಮಾಲತಿಬಾಯಿ ಸಾಳಂಕೆ ಫೌಡಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಸಂಘಟಕರಾದ ಅಶೋಕ ಅಣ್ಣಿಗೇರಿ ಅವರಿಗೆ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ, ಪ್ರಮಾಣ ಪತ್ರ ನೀಡಿದ್ದಾರೆ.
ಈ ವೇಳೆ ಸಂಘಟನೆ ಏಳಿಗೆ ಹಾಗೂ ಶಿಕ್ಷಕರ ಸಮಸ್ಯೆ ಗಳ ಕುರಿತು ಸುರ್ಧೀಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯದ 32 ಜಿಲ್ಲೆಗಳ ಪದಾಧಿಕಾರಿಗಳು ಭಾಗಿಯಾಗಿದರು. ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆಯಾದ ಅಶೋಕ ಅಣ್ಣಿಗೇರಿ ಅವರಿಗೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 