ನೆರೆ ಸಂತ್ರಸ್ಥರಿಗೆ ಸೌಲಭ್ಯದ ಭರವಸೆ

ಗದಗ 07: ಮಲಪ್ರಭಾ ನದಿ ಹಾಗೂ ಬೆಣ್ಣಿಹಳ್ಳ ಪ್ರವಾಹದಿಂದ ಹಾನಿಗೊಳಗಾಗುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಗಾಗಿ ಜಿಲ್ಲಾಡಳಿತವು ಸಧ್ಯ ಕೊಣ್ಣೂರಿನಲ್ಲಿ ತೆರಯಲಾಗಿರುವ ಪರಿಹಾರ ಕೇಂದ್ರ ಒಂದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಭೇಟಿ ನೀಡಿ ಮಹಿಳೆಯರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಧೈರ್ಯ ಹೇಳಿದರು. ಪರಿಹಾರ ಕೇಂದ್ರಗಳಲ್ಲಿ ಯಾವುದೇ ರೀತಿ ಲೋಪವಾಗದಂತೆ ಸಂತ್ರಸ್ಥರಿಗೆ ಊಟ, ವಸತಿ, ವೈದ್ಯಕೀಯ ಸೌಲಭ್ಯ ಹಾಗೂ ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನರಗುಂದ ತಹಶೀಲ್ದಾರ ಕೋರಿಶೆಟ್ಟರ, ತಾ,ಪಂ. ಕಾರ್ಯನಿರ್ವಾಹಕ ಅಧಿಕಾರಿ ಕನಕರೆಡ್ಡಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಪರಿಹಾರ ಕೇಂದ್ರಗಳ ವಿವರ: ರೋಣ ತಾಲೂಕಿನ ಕುರುವಿನಕೊಪ್ಪ, ಮೆಣಸಗಿ, ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಎ.ಪಿ.ಎಮ್.ಸಿ ಕಟ್ಟಡ, ಕೆ.ಇ.ಎಸ್. ಪ್ರೌಢಶಾಲೆ ಹಾಗೂ ಬೂದಿಹಾಳ, ವಾಸನ ಗ್ರಾಮಗಳಲ್ಲಿ ಸಂತ್ರಸ್ಥರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.