ರಾಣೇಬೆನ್ನೂರು ನಗರದ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
Attack on shops selling tobacco products in Ranebennur city
ರಾಣೇಬೆನ್ನೂರು ನಗರದ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 18: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಬುಧವಾರ ರಾಣೇಬೆನ್ನೂರ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್‌ಶಾಪ್‌ಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-4ರ ಅಡಿಯಲ್ಲಿ 13 ಪ್ರಕರಣಗಳಿಂದ ರೂ.1,300/-ದಂಡ ಹಾಗೂ ಕಲಂ-6ಬಿರಡಿ ನಾಲ್ಕು ಪ್ರಕರಣಗಳಲ್ಲಿ ರೂ.400/- ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಏಳು ಫಲಕಗಳನ್ನು ತೆರವುಗೊಳಿಸಲಾಗಿದೆ.
ಈ ತನಿಖಾ ದಾಳಿ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ.ಸಂತೋಷ ದಡ್ಡಿ, ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಹಿರಿಯ ಆರೋಗ್ಯ ನೀರೀಕ್ಷಕ ದೇವೇಂದ್ರ್ಪ, ಮಹೇಶ ಕುಮ್ಮೂರ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 