ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
Attention students and parents
ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
ಗದಗ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 