ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತ ಆರೋಗ್ಯ ಸೇವೆ ಪಡೆಯಿರಿ: ಡಿಎಚ್‌ಒ ಡಾ. ಯಲ್ಲಾ ರಮೇಶ್ ಬಾಬು ಕರೆ
Avail free healthcare services at government hospitals: DHO Dr. Yalla Ramesh Babu urges.
ಬಳ್ಳಾರಿ, ಜು. 4: ಬರ ಪರಿಸ್ಥಿತಿಯಿಂದ ರೈತರು ಹಾಗೂ ಸಾರ್ವಜನಿಕರು ಆರ್ಥಿಕ ಸಂಕಷ್ಟದ ಜೊತೆಗೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅನಗತ್ಯ ಖರ್ಚು ಮಾಡದೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉಚಿತ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮ ಮಟ್ಟದಲ್ಲೇ ವಿವಿಧ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದು, ಚಿಕಿತ್ಸೆಗಾಗಿ ನಗರ ಪ್ರದೇಶಗಳಿಗೆ ತೆರಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಗ್ರಾಮ ಮಟ್ಟದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ರಕ್ತದೊತ್ತಡ, ಮಧುಮೇಹ ಹಾಗೂ ಕಣ್ಣಿನ ತಪಾಸಣೆ ನಡೆಸಲಾಗುತ್ತಿದೆ. ಅಗತ್ಯ ಓಷಧಿ ಮತ್ತು ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಆಸ್ಪತ್ರೆಗಳಿಲ್ಲದ ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕಗಳ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಬರದ ಸಂದರ್ಭಗಳಲ್ಲಿ ನೀರಿನ ಕೊರತೆಯಿಂದ ಕಾಮಾಲೆ, ಕಾಲರಾ, ಟೈಫಾಯ್ಡ್ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಮೂಲಗಳನ್ನು ನಿಯಮಿತವಾಗಿ ಕ್ಲೋರಿನೇಷನ್ ಮಾಡಿ ನೀರಿನ ಗುಣಮಟ್ಟ ಪರೀಕ್ಷಿಸಲಾಗುತ್ತಿದೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ವಿಶೇಷ ಪೌಷ್ಟಿಕಾಂಶ ಸೇವೆ ಒದಗಿಸಲಾಗುತ್ತಿದೆ. ಗರ್ಭಿಣಿಯರಿಗೆ ಕಬ್ಬಿಣ ಮತ್ತು ಫೋಲಿಕ್ ಆಮ್ಲ ಮಾತ್ರೆಗಳು ಉಚಿತವಾಗಿ ನೀಡಲಾಗುತ್ತಿದ್ದು, ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ಗಳು ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಆಯುಷ್ಮಾನ್ ್ಣ್ಘೌ್ಲಿಹಿಪ್ಘ್ಯಷ್ಲ್ಖ ಕರ್ನಾಟಕ ಯೋಜನೆ ಅಡಿ ರೈತರು ಹಾಗೂ ಕೂಲಿ ಕಾರ್ಮಿಕರ ಕುಟುಂಬಗಳಿಗೆ ವರ್ಷಕ್ಕೆ ?5 ಲಕ್ಷದವರೆಗೆ ಉಚಿತ ನಗದುರಹಿತ ಚಿಕಿತ್ಸೆ ಸೌಲಭ್ಯ ಲಭ್ಯವಿದೆ. ತುರ್ತು ಪರಿಸ್ಥಿತಿಯಲ್ಲಿ 108 ಆಂಬುಲೆನ್ಸ್ ಸೇವೆ ಸದಾ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ. ರೈತರ ಮಾನಸಿಕ ಒತ್ತಡ ನಿವಾರಣೆಗೆ ’ಮನೋಚೈತನ್ಯ’ ಯೋಜನೆಯಡಿ ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಸಮಾಲೋಚನಾ ಶಿಬಿರಗಳನ್ನು ನಡೆಸಲಾಗುತ್ತಿದೆ. ತೀವ್ರ ಮಾನಸಿಕ ಒತ್ತಡ ಅಥವಾ ಖಿನ್ನತೆ ಎದುರಾದಲ್ಲಿ 14416 ಸಹಾಯವಾಣಿಗೆ ಕರೆ ಮಾಡಿ 24 ಗಂಟೆಗಳ ಕಾಲ ಉಚಿತ ಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 