ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮಕ್ಕೆ ಅವಟಿ ಆಗ್ರಹ

Avati demands action against those who assaulted the Kannadiga conductor

ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮಕ್ಕೆ ಅವಟಿ ಆಗ್ರಹ

ದೇವರಹಿಪ್ಪರಗಿ   24: ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಂದ ಬಸ್ ನಿರ್ವಾಹಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷರಾದ ಸಿದ್ರಾಮಪ್ಪ ಅವಟಿ (ಸಾತಿಹಾಳ) ಅವರು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಕನ್ನಡಿಗ ಕಂಡಕ್ಟರ್ ನ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಸೋಮವಾರದಂದು ಮಾತನಾಡಿದ ಅವರು,ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯ ಮಾಡಿ, ಬಸ್ ನಿರ್ವಾಹಕ ಮಹದೇವ ಮಲ್ಲಪ್ಪ ಹುಕ್ಕೇರಿ ಮೇಲೆ ಪ್ರಯಾಣಿಕರು ದೈಹಿಕ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿರುವ ನಿರ್ವಾಹಕರ ಮೇಲೆ ಈ ರೀತಿ ಭಾಷಾ ವಿಷಯದಲ್ಲಿ ಹಲ್ಲೆ ನಡೆಸಿರುವುದು ಆತಂಕಕಾರಿ ಘಟನೆ. ಕರ್ನಾಟಕದಲ್ಲಿ ಕನ್ನಡವೇ ಅಧಿಕೃತ ಭಾಷೆಯಾಗಿದ್ದು, ಇಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಯೂ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದು ಆದ್ಯ ಕರ್ತವ್ಯವಾಗಿದೆ. ಸಾರಿಗೆ ಸಂಸ್ಥೆ ನೌಕರರ ಮೇಲೆ ಈ ರೀತಿ ದೌರ್ಜನ್ಯ ಎಸಗಿರುವುದು ಖಂಡನೀಯ. ಕನ್ನಡ ಭಾಷೆಯ ಬಗ್ಗೆ ಅತೀವ ಕಾಳಜಿಯುಳ್ಳ ಮುಖ್ಯಮಂತ್ರಿಯವರು ಈ ಘಟನೆ ಬಗ್ಗೆ ಗಮನಹರಿಸಿ, ಹಲ್ಲೆ ನಡೆಸಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು. ಸಾರ್ವಜನಿಕ ಸೇವೆಯಲ್ಲಿರುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಹಾಗೂ ಈ ರೀತಿ ಮತ್ತೊಮ್ಮೆ ಘಟನೆ ನಡೆಯದ ಹಾಗೆ ಎಚ್ಚರಿಕೆ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು