ಜಾಗೃತಿ ಅಭಿಯಾನ: ಮನೆಮನೆ ಸಮೀಕ್ಷೆ ಹಾಗೂ ಪರೀಶೀಲನೆ ಕಾರ್ಯಕ್ಕೆ ಚಾಲನೆ
Awareness Campaign: Door-to-door survey and inspection drive launched
ಲೋಕದರ್ಶನ ವರದಿ
ದಾಂಡೇಲಿ 02: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಸಮೀಕ್ಷೆ ಹಾಗೂ ಪರೀಶೀಲನೆ ಕಾರ್ಯವನ್ನು ಸ್ಥಳೀಯ ಹಸಕಾಂ ಅಧಿಕಾರಿಗಳು ಆರಂಭಿಸಿದ್ದಾರೆ. ಯೋಜನೆಯ ಪಾರದರ್ಶಕತೆ ಮತ್ತು ದುರ್ಬಳಕೆ ತಡೆಯುವ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಕಾರ್ಯನಿರ್ವಹಣಾಧಿಕಾರಿ ದೀಪಕ ನಾಯ್ಕ್ ಮನವಿ ಮಾಡಿದ್ದಾರೆ.
ದಾಂಡೇಲಿ ಹಸಕಾಂ ವ್ಯಾಪ್ತಿಗೆ ಒಳಪಡುವ ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಫಲಾನುಭವಿಗಳ ಮನೆಗಳಿಗೆ ಹಸಕಾಂ ಸಿಬ್ಬಂದಿ ಮತ್ತು ಮೀಟರ್ ರೀಡರ್ಗಳು ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಅಗತ್ಯ ದಾಖಲೆಗಳ ಪರೀಶೀಲನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಧಾರ್ ಕಾರ್ಡ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ, ಓಟರ್ ಐಡಿ ಹಾಗೂ ಬಾಡಿಗೆ ಮನೆಯಲ್ಲಿರುವವರು ಟೆನನ್ಸಿ ಒಪ್ಪಂದ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕೆಂದು ಸೂಚಿಸಲಾಗಿದೆ. ಯೋಜನೆಯ ಸಮರ್ಕ ಅನುಷ್ಠಾನ ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಈ ಸಮೀಕ್ಷೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 