ಕುಷ್ಠರೋಗ ಕುರಿತು ಜಾಗೃತಿ ಅಗತ್ಯವಾಗಿದೆ: ಮುನಿರಾಜು
ಹಾವೇರಿ22: ಜನರಿಗೆ ಕುಷ್ಠ ರೋಗದ ಬಗ್ಗೆ ಸರಿಯಾದ ಮಾಹಿತಿ ಕೊರತೆಯಿಂದ ರೋಗಿ ಅಂಗವಿಕಲತೆಗೆ ಒಳಗಾಗುತ್ತಿದ್ದಾರೆ. ಕುಷ್ಠರೋಗದ ಕುರಿತು ಅರಿವು ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ರಾಜ್ಯವನ್ನಾಗಿ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಬೆಂಗಳೂರು ಕುಷ್ಠರೋಗ ವಿಭಾಗದ ಜಂಟಿ ನಿದರ್ೆಶಕ ಡಾ.ಕೆ.ಎಂ.ಮುನಿರಾಜು ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ವೈದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ಸಹಾಯಕರಿಗೆ ಆಯೋಜಿಸಲಾದ ಕುಷ್ಠರೋಗದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಹದ ಮೇಲೆ ತಿಳಿ ಬಿಳ್ಳಿ ಬಣ್ಣದ ಮಚ್ಚೆಗಳು ಕಂಡುಬಂದರೆ ಆ ಭಾಗಗಳಲ್ಲಿ ಯಾವುದೇ ಸ್ಪರ್ಶ ಜ್ಞಾನವಿಲ್ಲದಿದ್ದರೆ ಹಾಗೂ ನರಗಳಲ್ಲಿ ಉತ ಕಂಡುಬಂದರೆ ಸಾರ್ವಜನಿಕರು ತಕ್ಷಣ ಹತ್ತಿರದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡು ರೋಗವನ್ನು ಖಚಿತ ಪಡಿಸಿಕೊಳ್ಳಬೇಕು. ಕುಷ್ಠರೋಗದಲ್ಲಿ ಪಿಬಿ ಮತ್ತು ಎಂ.ಬಿ ಎರಡು ವಿಧಗಳಿವೆ. ಪಿಬಿ ಮೊದಲ ಹಂತವಾಗಿದ್ದು ಆರು ತಿಂಗಳ ಚಿಕಿತ್ಸೆ ನೀಡಲಾಗುತ್ತದೆ. ಎಂ.ಬಿ. ಎರಡನೇ ಹಂತವಾಗಿದ್ದು 12 ತಿಂಗಳ ಚಿಕಿತ್ಸೆಯನ್ನು ನೀಡಲಾಗುತ್ತದೆ. ಮೊದಲ ಹಂತದಲ್ಲಿದ್ದಾಗ ಚಿಕಿತ್ಸೆ ಪಡೆದರೆ ಅಂಗವಿಕಲತೆ ತಪ್ಪಿಸಬಹುದು ಎಂದು ಹೇಳಿದರು.
ಆಶಾ ಕಾರ್ಯಕತರ್ೆಯರು ಮನೆ ಮನೆಗೆ ಭೇಟಿ ನೀಡಿ ಕುಷ್ಠರೋಗದ ಕುರಿತು ಅರಿವು ಮೂಡಿಸಬೇಕು. ಸಂಶಯಾಸ್ಪದ ರೋಗದ ಲಕ್ಷಣಗಳು ಕಂಡುಬಂದವರನ್ನು ವೈದ್ಯರ ಬಳಿ ತಪಾಸಣೆಗೆ ಕರೆದೊಯ್ದು ಸೂಕ್ತ ಕೊಡಿಸಬೇಕು. ಕುಷ್ಠರೋಗಿಗಳಿಗೆ ಉಚಿತವಾಗಿ ಜಾಗ, ಮನೆ ಇನ್ನೂ ಹಲವಾರು ಸೌಲಭ್ಯಗಳನ್ನು ಸಕರ್ಾರ ನೀಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಮರ್ೂಲನಾ ಅಧಿಕಾರಿ ಡಾ.ಸತೀಶ ಎ.ಆರ್. ಅವರು ಮಾತನಾಡಿ, ಕುಷ್ಠರೋಗಿಗಳ ಸಂಖ್ಯೆ ಕಡಿಮೆಮಾಡಲು ಮೊದಲ ಹಂತದಲ್ಲೇ ರೋಗಿಯನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಿ ರೋಗ ಮತ್ತೊಬ್ಬರಿಗೆ ಹರಡದಂತೆ ತಡೆಗಟ್ಟಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 