ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
Awareness program on ZED and Lean project
ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ
ವಿಜಯಪುರ ಸೆಪ್ಟೆಂಬರ್,16 : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ಸಿಂದಗಿಯ ಹೊಸ ಮಿನಿ ವಿಧಾನಸೌಧದ ಹತ್ತಿರದ ಹೋಟೆಲ್ ಡಾಲ್ಪಿನ್‌ನಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಂದಗಿ ನಗರ ಸಭೆಯ ಅಧ್ಯಕ್ಷರಾದ ಶಾಂತವೀರ ಎಂ ಮನಗೂಳಿ ಅವರು ಝಡ್.ಇ.ಡಿ ಮತ್ತು ಲೀನ್ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಬೆಂಗಳೂರಿನ ಸಣ್ಣ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷರಾದ ನಿಂಗಣ್ಣ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರಾದ ಎಸ್.ವಿ.ಪಾಟೀಲ್, ಗಂಗಾಧರ ಸಂಬಣ್ಣಿ, ಪೀಟರ ಅಲೆಕ್ಸಾಂಡರ, ತಮ್ಮಣ್ಣ ಈಳಗೇರ, ಉಪಾಧ್ಯಕ್ಷರಾದ ಬಸವರಾಜ ಅಂಬಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಗಂಗಾಧರ ದೇಸಾಯಿ ಅವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 