ಆಶಾ ಕಾರ್ಯಕರ್ತೆಯರಿಗೆ ಮಕ್ಕಳ ಸುಕರ‌್ಷತೆ ಕುರಿತು ಜಾಗೃತಿ ಕಾರ್ಯಕ್ರಮ
Awareness program on child welfare for ASHA workers
ಕೊಪ್ಪಳ 09 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆ.6 ರಂದು ಗಂಗಾವತಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ “ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ” ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬಾಲ್ಯವಿವಾಹಗಳ ಪ್ರಮಾಣ ಶೇ.27.1 ಇದ್ದು, ಕಳೆದ ಸಾಲಿನಿಂದ ಇದು ಇಳಿಮುಖವಾಗುತ್ತಿದ್ದು, ಆದಾಗ್ಯೂ ಇನ್ನೂ ಸಹ ಜಿಲ್ಲೆಯಲ್ಲಿ ಅಧಿಕಾರಿಗಳ ಗಮನಕ್ಕೆ ಬರದಂತೆ ಬಾಲ್ಯವಿವಾಹ ನಡೆಯುತ್ತಿರುವುದನ್ನು ತಿಳಿಸುತ್ತಿದೆ. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಮುದಾಯದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಆದ್ದರಿಂದ ಗ್ರಾಮ ಮಟ್ಟದಲ್ಲಿ ವಿವಿಧ ರೀತಿಯಲ್ಲಿ ಜಾಗೃತಿಯನ್ನು ಮೂಡಿಸಲು ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಆಶಾ ಕಾರ್ಯಕರ್ತೆಯರಿಗೆ ಮಕ್ಕಳ ಹಕ್ಕುಗಳು, ಕಾನೂನುಗಳ ಮತ್ತು ಮಕ್ಕಳ ಸುರಕ್ಷತೆ ಕುರಿತು ಸಾಮರ್ಥ್ಯವನ್ನು ವೃದ್ಧಿಸಿ ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿ, ತನ್ಮೂಲಕ ಬಾಲ್ಯವಿವಾಹಗಳನ್ನು ತಡೆದು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗಂಗಾವತಿ ತಾಲೂಕು ವೈದ್ಯಾಧಿಕಾರಿ ಡಾ. ಗೌರಿಶಂಕರ ಮಾತನಾಡಿ, ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರಡಿಯಲ್ಲಿ ಯಾರೇ ಪಾಲಕರು/ಪೋಷಕರಿಗೆ ಮಗು ಬೇಡವಾದಲ್ಲಿ ಅಂತಹ ಮಗುವನ್ನು ಎಲ್ಲೆಂದರಲ್ಲಿ ಬಿಸಾಡಿ ಮಗುವಿನ ಪ್ರಾಣಕ್ಕೆ ಎರವಾಗದೇ, ಅಂತಹ ಮಗುವನ್ನು 1098 ಮೂಲಕ ಅಥವಾ ನೇರವಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಬಹುದಾಗಿದೆ. ನಂತರ ಸಮಿತಿಯು ಮಗುವನ್ನು ಕುಟುಂಬದ ವಾತಾವರಣದಲ್ಲಿ ಬೆಳಸಲು ಅಗತ್ಯ ಪುನರ್ವಸತಿಯನ್ನು ನಿಯಮಾನುಸಾರ ಕೈಗೊಳ್ಳುತ್ತದೆ. ಅಕ್ರಮ ದತ್ತು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮಬಾಹಿರವಾಗಿ ದತ್ತು ಪಡೆದಲ್ಲಿ ಅಂತಹ ಪಾಲಕರು ಮತ್ತು ದತ್ತು ನೀಡಿದ ಪೋಷಕರಿಗೂ ಸಹ ಶಿಕ್ಷೆಯನ್ನು ವಿಧಿಸಬಹುದಾಗಿದ್ದು, ಈ ಕುರಿತು ಸಮುದಾಯಗಳಲ್ಲಿ ಆಶಾ ಕಾರ್ಯಕರ್ತೆರು ಜಾಗೃತಿಯನ್ನು ಮೂಡಿಸಿ ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಸಹಕರಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಆಶಾಬೇಗಂ, ಸಮುದಾಯ ಆರೋಗ್ಯ ಅಧಿಕಾರಿಗಳಾದ ದುರಗೇಶ, ಶೋಭಾ ಬಿ ಜಾಲಿ, ಲೀಗಲ್ ಕಂ ಪ್ರೋಬೇಷನ ಆಫೀಸರ್ ಶಿವಲೀಲಾ ವನ್ನೂರು, ರಕ್ಷಣಾಧಿಕಾರಿಗಳು(ಅಸಾಂಸ್ಥಿಕ) ಪ್ರಶಾಂತ ರೆಡ್ಡಿ, ರವಿಕುಮಾರ ಪವಾರ, ಗಂಗಾವತಿ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 