ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ
Awareness program on road safety
ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ
ವಿಜಯಪುರ 29 : ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ, ಹಾಗೂ ಭಾರತ ಸ್ಕೌಟ್ ್ಘ ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗೆ ಗಾಂಧಿ ವೃತ್ತದ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ ಆಂದೋಲನ” ಹಾಗೂ “ರಸ್ತೆ ಸಂಚಾರಿಕೆ ಸ್ವಯಂ ಸೇವಕರ ಬೆಂಬಲ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು 18 ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ರಾಹುಲ ಎಸ್ ಡೊಂಗರೆ ಪ್ರಾಸ್ತಾವಿಕವಾಗಿ ಮಾತನಾಡಿ ನಗರದ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸದರು.
ಭಾರತ ಸ್ಕೌಟ್ ್ಘ ಗೈಡ್ಸ್ ಜಿಲ್ಲಾ ಸಂಘಟಕರಾದ ರಾಜಶೇಖರ್ ಖೆಡಗಿ, ಎಎಸ್‌ಐಗಳಾದ ಎಸ್ ಆರ್ ಚವ್ಹಾಣ, ಎಸ್.ಎಸ್. ಕಟ್ಟಿಮಣಿ, ಪೊಲೀಸ್ ಕಾನ್ಸ್‌ಟೇಬಲ್ ಕೆ.ಎಸ್.ಗೋಟ್ಯಾಳ, ಎಸ್.ಜಿ.ಕುಂಬಾರ, ಎಸ್.ಎಂ.ದೋಣಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 