ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಜಾಗೃತಿ ಜಾಥಾ
Awareness rally as part of Special Comprehensive Revision of Voter Lists-2026
ಲೋಕದರ್ಶನ ವರದಿ
ವಿಜಯಪುರ 01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ನಗರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕುರಿತು ಬೃಹತ್ ಸೈಕಲ್ ಜಾಥಾ ಆಯೋಜನೆ ಮಾಡುವ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಪಂಚಾಯತಿ ಕಾರ್ಯಾಲಯದಿಂದ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಜಾಥಾವನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಓದ್ರಾಮ ಅವರು ಮಾತನಾಡಿ ಯಾವುದೇ ಅರ್ಹ ಮತದಾರರು ಮತದಾನ ಹಕ್ಕಿನಿಂದ ವಂಚಿತರಾಗಬಾರದು ಹಿನ್ನೆಲೆಯಲ್ಲಿ ದಿನಾಂಕ 01-01-2026ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಗೆ ತಮ್ಮಹೆಸರು ಸೇರೆ್ಡ ಮಾಡುವುದು, ಮೃತಪಟ್ಟ, ಸ್ಥಳಾಂತರಗೊಂಡ ಮತದಾರರ ಹೆಸರು ತೆಗೆದು ಹಾಕುವುದು ಮತ್ತು ವಿಳಾಸ, ಇತರೆ ತಿದ್ದುಪಡಿಗಳನ್ನು ಮಾಡುವುದು. ಈ ವಿಶೇಷ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದರು. ಪ್ರಜಾಪ್ರಭುತ್ವದ ಯಶಸ್ಸು ಪ್ರತಿಯೊಬ್ಬ ಅರ್ಹ ಪ್ರಜೆಯು ಮತ ಚಲಾಯಿಸುವುದರ ಮೇಲೆ ನಿಂತಿದೆ. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು. 18 ವರ್ಷ ತುಂಬಿದ ಪ್ರತಿಯೊಬ್ಬರೂ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 