ರಾಷ್ಟ್ರೀಯ ಪಲ್ಸ್ ಪೋಲಿಯೋ ಹಿನ್ನೆಲೆಯಲ್ಲಿ ಕಂಪ್ಲಿ ಕೋಟೆಯಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
Awareness rally by students at Kampli Fort in the backdrop of National Pulse Polio
ಕಂಪ್ಲಿ 20: ನಾಳೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಂಪ್ಲಿ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಜಾಗೃತಿ ಜಾಥಾ ಜರುಗಿತು. ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನೀರೀಕ್ಷಕರಾದ ಎನ್.ಚನ್ನಬಸವರಾಜ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿ ಪೋಲಿಯೋ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.
5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕೆಂದ ಅವರು ಪಟ್ಟಣದಲ್ಲಿ 4953 ಮಕ್ಕಳನ್ನು ಗುರುತಿಸಿದ್ದು, ಇದಕ್ಕಾಗಿ 27 ಲಸಿಕಾ ಕೇಂದ್ರಗಳನ್ನು ರಚನೆ ಮಾಡಲಾಗಿದ್ದು, ಪಟ್ಟಣದ ಮೂರು ಕಡೆಗಳಲ್ಲಿ ಟ್ರಾನಸಿಸ್ಟ್ ಕೇಂದ್ರಗಳನ್ನು ರಚನೆ ಮಾಡಲಾಗಿದೆ ಎಂದರು. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ಯಶಸ್ವಿಯಾಗಲು 6 ಜನ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ನಂತರ ಕೋಟೆಯ ಎಲ್ಲಾ ಬೀದಿಗಳಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಮದ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಜಾಥವನ್ನು ನಡೆಸಿದರು. ಜಾಥಾದಲ್ಲಿ ಆಶಾ ಕರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಶಾಲೆಯ ಮುಖ್ಯ ಗುರುಗಳಾದ ಬಡಿಗೇರ್ ಜಿಲಾನ್ ಸಾಭ್, ಆಶಾ ಕಾರ್ಯಕರ್ತೆ ಆರ್.ವಲಿಮಾ, ಅಂಗನವಾಡಿ ಕಾರ್ಯಕರ್ತೆ ಶಿವಲೀಲಮ್ಮ, ಶಾಲಾ ಶಿಕ್ಷಕಿಯರಾದ ಶ್ವೇತಾ, ವರ್ಷಾ ಮಜುಮುದಾರ್, ಜೆ.ಅಕ್ಷತಾ, ಸುನಿತಾ, ಗೌಸಿಯಾ, ಕಾವ್ಯ, ಉಮ ಕೋಲ್ಕಾರ್, ಕೆ.ಜಯಶ್ರೀ, ಮುಖಂಡರಾದ ವಿಶ್ವನಾಥ್, ಸುಮಂತ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 