ಮದ್ಯ ಮತ್ತು ಮಾದಕಗಳಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಗೀತೆ

Awareness song on the ill effects of alcohol and drugs

 ಮದ್ಯ ಮತ್ತು ಮಾದಕಗಳಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಗೀತೆ 

ಬಳ್ಳಾರಿ 11: ಮದ್ಯವು ಮನುಷ್ಯನ ದೇಹಕ್ಕೆ ಮಾರಕವಾಗಿದ್ದು, ಕುಡಿತದಿಂದ ಕೇವಲ ವ್ಯಕ್ತಿ ಮೇಲೆ ಪರಿಣಾಮ ಬೀರದೇ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಹಾಗಾಗಿ ಮದ್ಯ ಮತ್ತು ಮಾದಕ ವಸ್ತುಗಳಿಂದ  ದೂರವಿರಬೇಕು ಎಂದು ಸಂಗನಕಲ್ಲು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ವಿ.ಗೋವಿಂದಮ್ಮ ನಾಗಿರೆಡ್ಡಿ ಅವರು ಹೇಳಿದರು. 

ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಮದ್ಯ ಮತ್ತು ಮಾದಕಗಳಿಂದಾಗುವ ದುಷ್ಪರಿಣಾಮಗಳ ಕುರಿತು  ಬಳ್ಳಾರಿ ತಾಲ್ಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಮಂಗಳವಾರ ಏರಿ​‍್ಡಸಿದ್ದ ಜಾಗೃತಿ ಗೀತೆಗಳ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾದದ್ದು, ಆದರೆ ಇಂದಿನ ಯುವಕರು ಹೆಚ್ಚಾಗಿ ಮದ್ಯಪಾನ ವ್ಯಸನಕ್ಕೆ ದಾಸರಾಗುತ್ತಿದ್ದು, ಇದರಿಂದ ದೂರ ಉಳಿಯಬೇಕು. ವ್ಯಸನಮುಕ್ತ ಗ್ರಾಮಕ್ಕೆ ನಾವೆಲ್ಲರೂ ಸೇರಿ ಕೈಜೋಡಿಸಬೇಕು ಎಂದರು. 

ಸಂಗನಕಲ್ಲು ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಾರೆಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ನಂತರ ಚಿಗುರು ಕಲಾ ತಂಡದ ವತಿಯಿಂದ ಜಾಗೃತಿ ಗೀತೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. 

ಈ ಸಂದರ್ಭದಲ್ಲಿ ಚಿಗುರು ಕಲಾ ತಂಡದ ಕಲಾವಿದರಾದ ಹುಲುಗಪ್ಪ. ಎಸ್‌.ಎಂ.ಹನುಮಯ್ಯ, ಹೆಚ್‌.ಜಿ.ಸುಂಕಪ್ಪ, ಬಿ.ಆನಂದ್, ಡಿ.ಹೇಮಂತ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.