ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತರುವುದು ಮಕ್ಕಳ ಕಲಿಕಾ ಹಬ್ಬ ಅಯೋಧ್ಯ ವೆಂಕಟೇಶ
Ayodhya Venkateswara Children's Learning Festival brings out the hidden talent in children
ಕಂಪ್ಲಿ 12 : ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು, ಕಲಿಕೆಯ ಮಟ್ಟವನ್ನು ಹೆಚ್ಚಿಸುತ್ತವೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಅಯೋಧ್ಯ ವೆಂಕಟೇಶ ಹೇಳಿದರು. ಸ್ಥಳೀಯ 8ನೇ ವಾರ್ಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವಾರ್ಡ್ ಸಮೂಹ ಸಂಪನ್ಮೂಲ ಕೇಂದ್ರದಿಂದ ಗುರುವಾರ ಆಯೋಜಿಸಿದ್ದ ಎಫ್‌ಎಲ್‌ಎನ್ ಆಧರಿತ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ, ಆತ್ಮವಿಶ್ವಾಸ ಮತ್ತು ಸಕ್ರೀಯ ಕಲಿಕೆ ಬೆಳೆಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದರು.
ನಂತರ ಸಮೂಹ ಸಂಪನ್ಮೂಲ ವ್ಯಕ್ತಿ(ಸಿಆರ್‌ಪಿ) ಎ.ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕಲಿಕೆಯ ಮೇಲಿನ ಆಸಕ್ತಿ ಹೆಚ್ಚಿಸಲು ಎಫ್‌ಎಲ್‌ಎನ್ ಕಲಿಕಾ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಹಿಂದುಳಿದ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಜೊತೆಗೆ ಅವರಲ್ಲಿರುವ ಪ್ರತಿಭೆಗಳನ್ನು ಹೊರತರುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದರು.
ಇಲ್ಲಿನ ಕಲಿಕಾ ಹಬ್ಬದ ಏಳು ಕಲಿಕಾ ಚಟುವಟಿಕೆಗಳಲ್ಲಿ 8 ಶಾಲೆಗಳ 64 ಮಕ್ಕಳು ಭಾಗವಹಿಸಿದ್ದರು. 14 ಜನ ನಿರ್ಣಾಯಕರಾಗಿ ಕೆಲಸ ನಿರ್ವಹಿಸಿದರು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ, ಮುಖಂಡರಾದ ನಡವಿ ಮಲ್ಲಿಕಾರ್ಜುನ, ಈರಣ್ಣ, ಇಸಿಒ ರೇವಣ್ಣ, ಎನ್‌ಪಿಎಸ್ ರಾಜ್ಯಾಧ್ಯಕ್ಷ ನಾಗನಗೌಡ ಎಂ.ಎ, ಸಿಆರ್‌ಪಿ ರೇಣುಕಾರಾಧ್ಯ, ವಿಕಲಚೇತನ ಸಂಘದ ಅಧ್ಯಕ್ಷ ಜೋಗಿ ರುದ್ರ್ಪ, ಮುಖ್ಯಶಿಕ್ಷಕಿ ಸುಮಿತ್ರ, ಸಾವಿತ್ರಿ ಬಾಯಿಪುಲೆ ಅಧ್ಯಕ್ಷೆ ಸುನಿತಾ ಪೂಜಾರಿ, ಕಂಪ್ಲಿ-ಕೋಟೆಯ ಸ.ಹಿ.ಪ್ರಾ ಶಾಲೆಯ ಮುಖ್ಯಗುರು ಹೊಸಗೇರ್ಪ, ಸಹ ಶಿಕ್ಷಕರಾದ ಪರಶುರಾಮ, ಪಂಪಾಪತಿ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 