ಆಯುರ್ವೇದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ
Ayurveda Continuing Medical Education Program
ಚಿಕ್ಕೋಡಿ 28: ಕೆಎಲ್‌ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಫೆಬ್ರವರಿ 27 ರಂದು ವೈದ್ಯರಿಗಾಗಿ ನಿರಂತರ ವೈದ್ಯಕೀಯ ಶಿಕ್ಷಣ (ಅಒಇ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜೀವನಶೈಲಿ ಮತ್ತು ಚಯಾಪಚಯ ಕಾಯಿಲೆಗಳನ್ನು ಆಯುರ್ವೇದ ಚಿಕಿತ್ಸೆಗಳ ಮೂಲಕ ನಿರ್ವಹಣೆಯ ಕುರಿತು ಇಂದಿನ ಯುವ ವೈದ್ಯರಿಗೆ ಅರಿತುಕೊಳ್ಳಲು ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನದ ಕಣಜಗಳಾಗಿವೆ. ಇವುಗಳ ಸದುಪಯೋಗ ಪಡೆದುಕೊಳ್ಳುವದು ವೈದ್ಯರ ಜವಾಬ್ದಾರಿಯಾಗಿವೆ ಎಂದು ಕೆ ಎಲ್ ಇ ಕಾಲೇಜಿನ ಪ್ರಾಚಾರ್ಯರು ಡಾ. ಕಿರಣಕುಮಾರ ಮುತ್ನಾಳಿ ಅವರು ಉದ್ಘಾಟಿಸಿ ಮಾತನಾಡಿದರು.
ವೈಜ್ಞಾನಿಕ ಅಧಿವೇಶನಗಳಲ್ಲಿ ಡಾ. ಶ್ರೀಧರ್ ಎಸ್. ಲಕ್ಕುಂಡಿ ಅವರು ಮೆಟಬಾಲಿಕ್ ಸಿಂಡ್ರೋಮ್ ಮತ್ತು ಪಂಚಕರ್ಮದ ಪಾತ್ರಕುರಿತು ಉಪನ್ಯಾಸ ನೀಡಿದರು. ಡಾ. ಕಂಚನಾ ಸಾಗರಅವರು ಮೆಟಬಾಲಿಕ್ ಸಿಂಡ್ರೋಮ್ ಕುರಿತು ಪ್ರಕರಣಅಧ್ಯಯನ ಮಂಡಿಸಿದರು. ಡಾ. ಹರಿಶಂಕರ್ ಪಿ.ವಿ. ಅವರು ಗುದಗತ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಇತ್ತೀಚಿನ ಅಭಿವೃದ್ಧಿಗಳ ಬಗ್ಗೆ ವಿವರಿಸಿದರು.
ಡಾ. ಅಶ್ವಿನಿ ಕುಂಬಾರ ಅವರು ಡಯಾಬಿಟಿಕ್ ರೆಟಿನೋಪಥಿಗೆ ಆಯುರ್ವೇದ ಚಿಕಿತ್ಸಾ ವಿಧಾನಗಳ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಡಾ.ಡಿ.ಆರ್. ಮುಧೋಳ ಅವರನ್ನು ಸನ್ಮಾನಿಸಲಾಯಿತು. ‘ಪ್ರಗತಿಹಿ ಎ ನ್ಯೂಸ್’ ಮಾಸಪತ್ರಿಕೆಯ 2 ಮತ್ತು 3ನೇ ಸಂಚಿಕೆಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಾ.ಮಹಾಜನ, ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಮತ್ತು ಸ್ಥಳೀಯ ವೈದ್ಯರು ಭಾಗವಹಿಸಿದರು. ಕಾರ್ಯಕ್ರಮವನ್ನು ಡಾ.ನಿಹಾರಿಕಾ ನಿರೂಪಿಸಿದರು. ಡಾ. ಸೂರಜ ಕುಂಬಾರ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 