ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ
ಲೋಕದರ್ಶನ ವರದಿ
ಮೂಡಲಗಿ 17: ಶಬರಿಮಲೆ ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಲು ಆಗ್ರಹಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಕಲ್ಮೇಶ್ವರ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ ಕಛೇರಿಯ ಶಿರಸ್ತೆದಾರ ರಾಜು ಕಡಕೋಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
800 ವರ್ಷಗಳ ಇತಿಹಾಸವಿರುವ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ಸವರ್ೋಚ್ಚನ್ಯಾಯಾಲಯ ನೀಡಿದ ತೀಪರ್ಿನಿಂದ ಸಹಸ್ರ ಕೋಟಿ ಭಕ್ತ ಸಮೂಹದ ಮನಸ್ಸಿಗೆ ಆಘಾತ ಉಂಟುಮಾಡಿದೆ, ನ್ಯಾಯಾಲಯವು ತಮ್ಮ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.
ಖಾನಟ್ಟಿಯ ಬಸವಾನಂದ ಸ್ವಾಮಿಗಳು ಮಾತನಾಡಿ, ಶಬರಿಮಲೆ ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಪ್ರವೇಶ ನೀಡುವುದಿದ್ದರೇ, ಹತ್ತು ವರ್ಷದೊಳಗಿನ ಕುವರಿಯರಿಗೆ ಹಾಗೂ ಐವತ್ತು ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರವೇಶ ನೀಡಬೇಕು. ಇಲ್ಲವಾದಲ್ಲಿ ದೇಶದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವದು ಎಂದರು.
ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ, ಗುರುಸ್ವಾಮಿ ರವಿ ನೇಸೂರ, ಸಂಜೀವ ಶೆಟ್ಟಿ, ಈಶ್ವರ ಗೋಲಶೆಟ್ಟಿ, ಸುರೇಶ ಸವಸುದ್ದಿ, ಸುರೇಶ ಪತ್ತಾರ, ಸುಧೀರ ನಾಯರ್, ಚೇತನ ನಿಶಾನಿಮಠ, ಸದಾಶಿವ ನಿಡಗುಂದಿ, ಕುಮಾರ ಗಿರಡ್ಡಿ, ಚನಬಸು ಝಂಡೇಕುರಬರ, ಎಮ್.ಎಸ್.ಮೂಗಳಖೋಡ ಹಾಗೂ ಗುಲರ್ಾಪೂರ, ಕಂಕಣವಾಡಿ, ಹಳ್ಳೂರ, ತುಕ್ಕನಟ್ಟಿಯ ಭಕ್ತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 