ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ, ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಅವಿರೋಧ ಆಯ್ಕೆ
B. Basavaraja elected unopposed as new president of cooperative society, Talawara Ganganna elected
ಕಂಪ್ಲಿ 06: ಪಟ್ಟಣದ ಮುದ್ದಾಪುರ ಅಗಸಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಬಸವರಾಜ ಹಾಗೂ ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಇವರು ಅವಿರೋಧವಾಗಿ ಆಯ್ಕೆಗೊಂಡರು.
ಹಿಂದಿನ ಅಧ್ಯಕ್ಷ ಕಟ್ಟೆ ಸಣ್ಣ ದುರುಗಪ್ಪ ಹಾಗೂ ಉಪಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಇವರು ರಾಜಿನಾಮೆ ನೀಡಿದ ಹಿನ್ನಲೆ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ಶುಕ್ರವಾರ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಬಸವರಾಜ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಳವಾರ ಗಂಗಣ್ಣ ಇವರು ನಾಮಪತ್ರ ಸಲ್ಲಿಸಿದ್ದರು. ಇವರಿಬ್ಬರೂ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಬಸವರಾಜ ಮತ್ತು ಉಪಾಧ್ಯಕ್ಷರಾಗಿ ತಳವಾರ ಗಂಗಣ್ಣ ಆಯ್ಕೆಗೊಂಡರು.
ಈ ಚುನಾವಣೆ ಪ್ರಕ್ರಿಯೆ ವೇಳೆ ಚುನಾವಣಾಧಿಕಾರಿ ರಮೇಶ, ಮುಖ್ಯಕಾರ್ಯನಿರ್ವಾಹಕ ಹೆಚ್.ಈರಣ್ಣ, ನಿರ್ದೇಶಕರಾದ ಅಳ್ಳಿ ನಾಗರಾಜ, ಕಟ್ಟೆ ಸಣ್ಣ ದುರುಗಪ್ಪ, ಈರ್ಪ ಜೋಳಮಾರ, ಸಣ್ಣೆಪ್ಪ ಎಸ್. ರಾಜೇಶ ಶೆರೆಗಾರ, ಟಿ.ನಿರಂಜನಯ್ಯ, ಬಳೆ ಮಲ್ಲಿಕಾರ್ಜುನ, ಕೃಷ್ಣ ಕೆ, ಕೆ.ನಾಗಮ್ಮ, ಬಿಎಂ ವಿಶಾಲಾಕ್ಷಿ ಇದ್ದರು. ನಂತರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಅಯೋಧ್ಯ ವೆಂಕಟೇಶ, ಆಟೋ ರಘು, ಗುರು ರಾಮಸಾಗರ ಸೇರಿದಂತೆ ಸಿಬ್ಬಂದಿ ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 