ಬ.ಸಾಲವಾಡಗಿ: ಕ್ಲಸ್ಟರ್ ಮಟ್ಟದ ಕ್ರೀಡಾಕೂಟ
B.Salvadagi: Cluster level sports event
ಬ.ಸಾಲವಾಡಗಿ: ಕ್ಲಸ್ಟರ್ ಮಟ್ಟದ ಕ್ರೀಡಾಕೂಟ
ತಾಳಿಕೋಟೆ 08: ತಾಲ್ಲೂಕಿನ ಬ ಸಾಲವಾಡಗಿ ಗ್ರಾಮದಲ್ಲಿ ಬ.ಸಾಲವಾಡಗಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಮಟ್ಟದ ಕ್ರೀಡಾ ಕೂಟವು ಗುರುವಾರ ಜರುಗಿತು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯ ಅತಿಥಿ ಸರ್ಕಾರಿ ಪ್ರೌಡಶಾಲೆಯ ಮುಖ್ಯಶಿಕ್ಷಕಿ ಸುಮಂಗಲಾ ಕೋಳೂರ ಅವರು, ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ದೈಹಿಕವಾಗಿ ಗಟ್ಟಿಯಾಗಿ ಆರೋಗ್ಯವಂತರಿದ್ದರೆ ಮಾತ್ರ ಉತ್ತಮ ಶಿಕ್ಷಣ, ಇತರೆ ಕೆಲಸಗಳನ್ನು ಮಾಡಲು ಸಾಧ್ಯವಿದೆ. ಆದ್ದರಿಂದ ಮಕ್ಕಳು ಓದಿನ ಜೊತೆಗೆ ಕ್ರೀಡೆಗಳಲ್ಲೂ ಭಾಗವಹಿಸಬೇಕು ಎಂದರು.
ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್.ಡಿಎಂ.ಸಿ ಅಧ್ಯಕ್ಷ ಎಸ್.ಡಿ.ನೀರಲಗಿ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿಎಂಸಿ ಅಧ್ಯಕ್ಷ ಶರಣು ಯಾಳಗಿ, ಸಿ.ಆರಿ್ಪ. ಆರ್.ಎಸ್.ಮೂರಮನ, ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಕೀಫ ಅಹಮದ್ ಗೋಲಂದಾಜ್, ಬ.ಸಾಲವಾಡಗಿ ಕ್ಲಸ್ಟರ್ ವ್ಯಾಪ್ತಿಯ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
2024-25ನೇ ಸಾಲಿನ 14 ವರ್ಷ ವಯೋಮಿತಿಯ ಬಾಲಕರ ಖೋ ಖೋ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಮೈಲೇಶ್ವರ ಗ್ರಾಮದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳಾದ ರುದ್ರಗೌಡ ಬಿರಾದಾರ ಹಾಗೂ ಬಸವರಾಜ ಹೂಗಾರ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 