ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ
B account assets are eligible for A account
ಬೆಂಗಳೂರು: ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಯ ಅಕ್ರಮ ಬಡಾವಣೆಗಳಲ್ಲಿರುವ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ಗ್ರೇಟರ್ ಬೆಂಗಳೂರು ಅಥಾರಿಟಿ ಮಾದರಿಯಲ್ಲೇ ನಿಯಮ ರೂಪಿಸಿ ರಾಜ್ಯದಾದ್ಯಂತ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಲಾಗುತ್ತೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತೆಗಳಿಗೂ ಎ-ಖಾತಾ ಮಾನ್ಯತೆ 'ಭಾಗ್ಯ'; ಸಚಿವ ಸಂಪುಟ ಅನುಮೋದನೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ 'ಬಿ-ಖಾತಾ' ನಿವೇಶನ/ಕಟ್ಟಡ/ ಅಪಾರ್ಟ್ ಮೆಂಟ್/ ಫ್ಲಾಟ್ ಗಳಿಗೆ ಎ-ಖಾತಾ" ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಜಿಬಿಎ ಮಾದರಿಯಲ್ಲೆ ನಿಯಮ ರೂಪಿಸಿ ಎ ಖಾತಾ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದೆ ಎಂದು ಸಚಿವರು ತಿಳಿಸಿದರು.
ಇನ್ನು ದಂಡದ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ. ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ದರದ ಶೇ. 5 ರಷ್ಟು ದಂಡ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಕೊಟ್ಟಿದೆ. ಆದರೆ ಶೇ. 5 ರಷ್ಟು ದಂಡಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ ಹೆಚ್ಚು ಅರ್ಜಿ ಸಲ್ಲಿಕೆಯೂ ಆಗಿಲ್ಲ. ಹಾಗಾಗಿ ಶೇ. 5 ದಂಡದ ಪ್ರಮಾಣ ಇಳಿಕೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 