ಬಿಸಿಎಮ್ ಇಲಾಖೆ ಮೆನ್ಯೂ ಚಾರ್ಟ್ ಬದಲಾವಣೆ ಖಂಡಿಸಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಸ್‌ಎಫ್‌ಐ ಮನವಿ
ರಾಣೇಬೆನ್ನೂರ 24: ಶ್ರೀರಾಮ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಣೇಬೆನ್ನೂರ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬಿಸಿಎಮ್ ಇಲಾಖೆಯ ಮಾನ್ಯ ಗ್ರೇಡ್-2 ತಾಲ್ಲೂಕು ವಿಸ್ತಾರಣಧಿಕಾರಿಗಳಾದ ಪ್ರಸಾದ್ ಆಲದಕಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ನರಳುವಂತಹ ಸ್ಥಿತಿ ನಿರ್ಮಾಣವಾಗಿದೆ. ನೂರಾರು ವಿದ್ಯಾರ್ಥಿಗಳು ದೂರದ ಊರಿನಿಂದ ಬಂದು ವಸತಿ ನಿಲಯದಲ್ಲಿ ಆಶ್ರಯ ಪಡೆದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯಗೊಂಡಿದೆ.
"ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ನೀಡಿದ ವಸತಿ ನಿಲಯದ ಊಟದ ಮೆನ್ಯೂ ಚಾರ್ಟ್ ಪ್ರಕಾರ ಟೆಂಡರ್ ಧರಕ್ಕೂ ಮಾರುಕಟ್ಟೆಯಲ್ಲಿರು ಪ್ರಸ್ತುತ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಕ್ಕೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತದೆ ಎಂದು ಇತ್ತೀಚೆಗೆ ಜಿಲ್ಲಾದ್ಯಂತ ಪ್ರತ್ಯೇಕವಾಗಿ ಹಾವೇರಿ ಬಿಸಿಎಮ್ ಇಲಾಖೆಯ ಮೆನ್ಯೂ ಚಾರ್ಟ್ ತಯಾರಿಸಿ ಬದಲಾವಣೆ ಮಾಡಲು ಹೊರಟಿರುವುದು ವಿದ್ಯಾರ್ಥಿ ವಿರೋಧಿಯಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮತಿಗಾಗಿ ಕಾಯುತ್ತಿರುವ ಬೆನ್ನಲ್ಲೇ ಜೆಲ್ಲಾದ್ಯಂತ ಹಾಸ್ಟೆಲ್ ಗಳಲ್ಲಿ ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕತ್ತರಿ ಹಾಕುತ್ತಿರವುದು ನಿಲ್ಲಬೇಕು." ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಯನ್ನು ಕನಿಷ್ಠ 3500/ರೂ ಗಳಿಗೆ ಹೆಚ್ಚಿಸಬೇಕು. ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿದಿನದ ಮೂರೊತ್ತಿನ ಊಟಕ್ಕೆ ಕೇವಲ 60-70 ರೂ ಗಳಂತೆ ತಿಂಗಳಿಗೆ 1850 ರೂಗಳನ್ನು ಮಾತ್ರ ನೀಡಲಾಗುತ್ತಿದೆ. ಎಲ್ಲ ಆಹಾರ ಪದಾರ್ಥಗಳು, ಗ್ಯಾಸ್, ಬೆಲೆ ಏರಿಕೆ ಆಗಿದೆ. ಆದರೂ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಸರ್ಕಾರ ಹೆಚ್ಚಿಸಿಲ್ಲ.
ಇದರಿಂದ ರಾಜ್ಯದ ವಿದ್ಯಾರ್ಥಿಗಳು ಪೌಷ್ಠಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಜೈಲಿನಲ್ಲಿರುವ ಕೈದಿಗಳಿಗಳ ಆಹಾರಕ್ಕೆ ಪ್ರತಿದಿನ 450 ರಂತೆ ಒಂದು ತಿಂಗಳಿಗೆ ಸಾವಿರಾರು ರೂಪಾಯಿ ಖರ್ಚು ಮಾಡುವ ಸರ್ಕಾರ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ ಮಾಸಿಕ 3500 ರೂಗಳಿಗೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.ವಸತಿ ನಿಲಯದಲ್ಲಿ ಅಸ್ವಚ್ಛತೆ ಸಮಸ್ಯೆ ವಿಪರೀತವಾಗಿದ್ದು, ಕೆಲ ವಿದ್ಯಾರ್ಥಿಗಳಿಗೆ ಪುಸ್ತಕ ದೊರೆತಿಲ್ಲ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೀವ್ರ ತರನಾದ ಅಡಚಣೆಯುಂಟಾಗಿದೆ. ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಮೂಲಭೂತ ವಸ್ತುಗಳಾದ ನೀರಿನ ಬಕೆಟ್, ತಟ್ಟೆ, ಲೋಟ, ಬೆಡ್ ಶೀಟ್‌ಗಳನ್ನು, ಫ್ಯಾನ್, ಕರೆಂಟ್ ಸ್ವೀಚ್ ಬೋರ್ಡ, ಶೌಚಾಲಯ ಮತ್ತು ಸಂಪೂರ್ಣ ಹಾಸ್ಟೆಲ್ ಆವರಣ ಶುಚಿಯಾಗಿಡದೆ ಸಾಂಕ್ರಾಮಿಕ ಖಾಯಿಲೆಗಳು ಹರಡುವ ಭೀತಿ ಎದುರಾಗುತ್ತಿದೆ. ಈ ಕೂಡಲೇ ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸುತ್ತದೆ.ಬಿಸಿಎಮ್ ಇಲಾಖೆಯ ಮಾನ್ಯ ಗ್ರೇಡ್-2 ತಾಲ್ಲೂಕು ವಿಸ್ತಾರಣಧಿಕಾರಿ ಪ್ರಸಾದ್ ಆಲದಕಟ್ಟಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಶೀಘ್ರವಾಗಿ ಇಲಾಖೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ತಾಲ್ಲೂಕು ಉಪಾಧ್ಯಕ್ಷ ಬಸವರಾಜ ಕೊಣಸಾಲಿ, ಮಹೇಶ ಮರೋಳ, ಮುಖಂಡರಾದ ವೀರೇಶ್ ಕುಪಗಡ್ಡಿ, ವಿಕಾಸ್ ಮುತ್ತಳ್ಳಿ, ಚಂದ್ರು ಶಿರಗಂಬಿ, ಮನು ತಿಳುವಳ್ಳಿ, ಶಶಾಂಕ್ ಎನ್ಯವರ್, ನಾಗರಾಜ, ತೇಜು ಎಸ್, ಮಾಲತೇಶ್ ಅಡಿವೇರ್, ಪುನೀತ್, ವೀರೇಶ್ ಕೆ ಆರ್, ಶ್ರವಣ್ ಕುಮಾರ್, ವರುಣ್, ಪುನೀತ್ ನಿರಂಜನ್, ಪ್ರವೀಣ್, ಬಸವರಾಜ್, ಆಕಾಶ್ ಬಸವನಗೌಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.