ಬಿಮ್ಸ್: ವೈದ್ಯರ ನೇಮಿಸಿ, ಉತ್ತಮ ಚಿಕಿತ್ಸೆ ನೀಡಿ - ವೈ.ಎಂ. ಸತೀಶ್ ಆಗ್ರಹ
BIMS: Appoint a doctor and provide good treatment - Y.M. Satish demands
ಬಳ್ಳಾರಿ 10: ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ನಲ್ಲಿ 288 ತಜ್ಞ ವೈದ್ಯರ ಹುದ್ದೆಗಳು, 858 ಸಿಬ್ಬಂದಿಗಳು ಮತ್ತು ದಂತ ಕಾಲೇಜಿನಲಿ 23 ವೈದ್ಯರ ಹುದ್ದೆಗಳು ಖಾಲಿ ಇವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದ್ದಾರೆ. ಬಳ್ಳಾರಿ - ವಿಜಯನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ನೀಡಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೋರಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ಕ್ಕೆ ಒಟ್ಟು 450 ತಜ್ಞ ವೈದ್ಯರ ಹುದ್ದೆಗಳು ಮಂಜೂರಾಗಿದ್ದು, ಕೇವಲ 162 ಹುದ್ದೆಗಳು ಮಾತ್ರ ಭರ್ತಿಯಾಗಿವೆ. 1071 ಇತರೆ ಸಿಬ್ಬಂದಿಯ ಹುದ್ದೆಗಳು ಮಂಜೂರಾಗಿದ್ದು 213 ಮಾತ್ರ ನೇಮಕಗೊಂಡಿವೆ. ಮುಂದಿನ ಐದು ವರ್ಷಗಳಲ್ಲಿ 32 ತಜ್ಞ ವೈದ್ಯರು, 31 ಇತರೆ ಸಿಬ್ಬಂದಿ ಸೇವಾ ನಿವೃತ್ತಿ ಹೊಂದಲಿದ್ದಾರೆ.
ಡೆಂಟಲ್ ಕಾಲೇಜಿನಲ್ಲಿ 47 ವೈದ್ಯರ ಹುದ್ದೆಗಳು ಮಂಜೂರಾಗಿದ್ದು, 24 ಮಾತ್ರ ನೇಮಕಗೊಂಡಿವೆ ಎಂದರು. ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ನಲ್ಲಿ ಎನ್‌ಎಂಸಿ ಮತ್ತು ಡೆಂಟಲ್ ಕಾಲೇಜಿನಲ್ಲಿ ಡಿಸಿ (ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ) ನಿಯಮಗಳ ಪ್ರಕಾರ ಒಳ ಮೀಸಲಾತಿ ವಿವಾದ ಇತ್ಯರ್ಥವಾದ ನಂತರ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಉತ್ತರಿಸಿದರು. ಬಿಟಿಪಿಎಸ್ ಭೂ ಸಂತ್ರಸ್ತರ ಪರ : ವೈ.ಎಂ. ಸತೀಶ್ಬಳ್ಳಾರಿ ಥರ್ಮಲ್ ಪವರ್ ಪ್ಲಾಂಟ್ಗಾಗಿ 1,800.92 ಎಕರೆ ಭೂಮಿಯನ್ನು ಸ್ವಾಧೀನ ಪಡೆದುಕೊಳ್ಳಲಾಗಿದೆ. ಭೂ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದ್ದರೂ, ಉದ್ಯೋಗ ನೀಡುವಲ್ಲಿ ಸೂಕ್ತ ಕ್ರಮ ಕೈಗೊಂಡಿಲ್ಲ. ಕಾರಣ ಸರ್ಕಾರ ಬಿಟಿಪಿಎಸ್ನ ಭೂ ಸಂತ್ರಸ್ತರಿಗ ತಪ್ಪದೇ ಉದ್ಯೋಗ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯರು ಆಗ್ರಹಿಸಿದರು. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಭೂ ಸಂತ್ರಸ್ತ 293 ಕುಟುಂಬಗಳಲ್ಲಿ 169 ಅಭ್ಯರ್ಥಿಗಳಿಗೆ ಅರ್ಹತೆ ಆಧರಿಸಿ ತರಬೇತಿ ಮತ್ತು ಉದ್ಯೋಗ ನೀಡಲಾಗಿದೆ. ಉಳಿದ 124 ಸಂತ್ರಸ್ತ ಕುಟುಂಬಗಳ ಪೈಕಿ ಕೆಲವು ನ್ಯಾಯಾಲಯ ಇನ್ನಿತರೆ ಕಾರಣಗಳಿಗಾಗಿ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 