ಬಿಜೆಪಿ ಶಾಸಕ ಲೋಕಾಯುಕ್ತರ ಬಲೆಗೆ: ಬಿಜೆಪಿಯವರೇ ವ್ಯಾಖ್ಯಾನ ಕೊಡಲಿ - ಡಿಸಿಎಂ ಶಿವಕುಮಾರ್
BJP MLAs trapped by Lokayukta: BJP should provide explanation - DCM Shivakumar
ಕಾರವಾರ 22 : ಲೋಕಾಯುಕ್ತವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಆ ಸಂಸ್ಥೆಯ ತನಿಖಾ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಕಾರವಾರದಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣದ ಬಗ್ಗೆ ಬಿಜೆಪಿಯವರೇ ಉತ್ತರಿಸಬೇಕು ಮತ್ತು ಅವರೇ ವ್ಯಾಖ್ಯಾನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರವಾರದಲ್ಲಿ ರವಿವಾರ ಖಡಕ್ ಪ್ರತಿಕ್ರಿಯೆ ನೀಡಿದರು. ಸ್ವಪಕ್ಷದ ಶಾಸಕರ ಹೇಳಿಕೆಗಳು ಹಾಗೂ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿರುವ ಶಾಸಕ ಇಕ್ಬಾಲ್ ಹುಸೇನ್, ರವಿ ಮತ್ತು ಶಿವಗಂಗಾ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ’ಅವರೆಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿದ್ದರೆ ನನಗೆ ಮತ್ತು ಪಕ್ಷಕ್ಕೆ ಒಳ್ಳೆಯದು ’ ಎಂದು ಎಚ್ಚರಿಕೆ ನೀಡಿದರು. ವಿದೇಶ ಪ್ರವಾಸಕ್ಕೆ ತೆರಳಿರುವ ಶಾಸಕರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ’ಹೋದವರೆಲ್ಲರೂ ನಮ್ಮವರೇ, ಅವರು ಮರಳಿದ ನಂತರ ಪ್ರವಾಸದ ಉದ್ದೇಶದ ಬಗ್ಗೆ ವಿಚಾರಿಸುತ್ತೇವೆ ’ ಎಂದರು.....
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 