ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಅರುಣಕುಮಾರ ಪೂಜಾರ ರವರು ಕೆಟ್ಟ ಶಬ್ದಗಳನ್ನು ಬಳಸಿರುವುದು ತೀವ್ರ ಖಂಡನೀಯ
ಹಾವೇರಿ 26: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರ ಕುರಿತು ಬಿಜೆಪಿ ಪ್ರತಿಭಟನಾ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಅರುಣಕುಮಾರ ಪೂಜಾರ ರವರು ಕೆಟ್ಟ ಶಬ್ದಗಳನ್ನು ಬಳಸಿರುವುದು ತೀವ್ರ ಖಂಡನೀಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೆಳಿಕೆ ನೀಡಿದ ಅವರು ಇಂತಹ ಶಬ್ದಗಳನ್ನು ಉಪಯೋಗಿಸಿರುವ ಅವರ ಕೀಳಯರುಮೆಯ ಮತ್ತು ಕೊಳಕು ಮನಸ್ಥಿತಿಯನ್ನು ತೋರಿಸುತ್ತದೆ.ಈಗಾಗಲೇ ಡಿ.ಕೆ ಶಿವಕುಮಾರ ಅವರು ಸಂವಿಧಾನದ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ್ದಾರೆ.ನಮ್ಮ ರಾಜ್ಯಾಧ್ಯಕ್ಷರಿಗೆ ಕೆಟ್ಟ ಶಬ್ದಗಳನ್ನು ಉಪಯೋಗಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷರು ಕ್ಷಮೆ ಕೇಳಬೇಕು.ಇಲ್ಲದಿದ್ದರೆ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಸಂಜೀವಕುಮಾರ ನೀರಲಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.