ಇಂಡಿಯಲ್ಲಿ ಬಿಜೆಪಿ ಸಂಭ್ರಮಾಚರಣೆ

BJP celebrations in Indy

ಇಂಡಿಯಲ್ಲಿ ಬಿಜೆಪಿ ಸಂಭ್ರಮಾಚರಣೆ

ಇಂಡಿ, 08; ದೆಹಲಿ ವಿಧಾನಸಭೆ ಚುನಾವಣೆ 2025 ರ  ಫಲಿತಾಂಶ ಪ್ರಕಟವಾಗುತ್ತಿದ್ದಂತೆ, 27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸುತ್ತಿದಂತೆ . ಇತ್ತ ಇಂಡಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬಸವೇಶ್ವರ ವೃತ್ತದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಲಾಯಿತು.    ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ ಅವರು ಮಾತನಾಡಿ ಭಾರತೀಯ ಜನತಾ ಪಕ್ಷವು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಅಗತ್ಯವಿರುವ ಬಹುಮತ ಸಾಬೀತು ಪಡಿಸಿದೆ, ನಮ್ಮ ದೇಶದ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ದಿಯತ್ತ ಕೊಂಡುವುತ್ತಿದ್ದಾರೆ. ಇವರ ಮೇಲೆ ವಿಶ್ವಾಸ ಇಟ್ಟು ದೆಹಲಿಯ ಮತದಾರರು ಬಿಜೆಪಿ ಪಕ್ಷಕ್ಕೆ ಆರ್ಶಿವಾದ ಮಾಡಿದ್ದಾರೆ ಮುಂಬರುವ ದಿನಗಳಲ್ಲಿ ಕೂಡಾ ಕರ್ನಾಟಕದಲ್ಲಿ ಕೂಡಾ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ಹೇಳಿದರು.    ಈ ಮಾತನಾಡಿದ ಇಂಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಿವಡೆ ಅವರು ಮಾತನಾಡಿ ನರೇಂದ್ರ ಮೋದಿಯವರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಮೇಲೆ ನಂಬಿಕೆ ಇಟ್ಟು ದೆಹಲಿಯ ಮತದಾರರು 27 ವರ್ಷಗಳ ಬಳಿಕ ಬಿಜೆಪಿ ಸರ್ಕಾರ ರಚನೆ ಮಾಡಲು ಅವಕಾಶ ಕಲ್ಪಿಸಿದ್ದಾರೆ ಬಿಜೆಪಿ ಪಕ್ಷ ಬಡವರ ದಲಿತರ ಮದ್ಯಮ ವರ್ಗದ ಜನರ ಅಭಿವೃದ್ಧಿಗೆ ಸದಾ ಬದ್ಧವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅನೀಲಗೌಡ ಬಿರಾದಾರ, ಅನೀಲ ಜಮಾದಾರ ಹನುಮಂತರಾಯಗೌಡ ಪಾಟೀಲ, ರವಿ ವಗ್ಗೆ, ಮಲ್ಲು ದೇವರ ದೇವಿಂದ್ರ ಕುಂಬಾರ, ಸಂಜು ದಶವಂತ, ರಾಮಸಿಂಗ್ ಕನ್ನೊಳ್ಳಿ, ಸುನಂದಾ ಗಿರಣಿವಡ್ಡರ, ಅನುಸುಯಾ ಮದರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.