ಕಾರವಾರದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
BJP holds massive protest in Karwar condemning state government's anti-farmer policy
ಕಾರವಾರ 04: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಹಾಗೂ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ. ರೈತರ ಮಕ್ಕಳಿಗೆ ನೀಡಲಾಗುತ್ತಿದ್ದ ’ವಿದ್ಯಾನಿಧಿ’ ವಿದ್ಯಾರ್ಥಿವೇತನ ಮತ್ತು ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರದಿಂದ ನೀಡುತ್ತಿದ್ದ 4,000 ರೂ. ಪ್ರೋತ್ಸಾಹ ಧನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.
ಮಳೆ ಹಾನಿ ಪರಿಹಾರಕ್ಕೆ ಆಗ್ರಹ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮೆಕ್ಕೆಜೋಳ, ಭತ್ತ, ಹತ್ತಿ ಬೆಳೆಗಳು ಸೇರಿದಂತೆ ಮೀನುಗಾರಿಕೆ ಮತ್ತು ತೋಟಗಾರಿಕೆ ಕ್ಷೇತ್ರಗಳಿಗೆ ಅಪಾರ ಹಾನಿಯಾಗಿದೆ. ಆದರೆ, ಸರ್ಕಾರ ಇದುವರೆಗೂ ಸಮರ್ಕ ಸಮೀಕ್ಷೆ ನಡೆಸಿಲ್ಲ. ಮುಖ್ಯಮಂತ್ರಿಗಳಾಗಲಿ ಅಥವಾ ಸಚಿವರಾಗಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ರೂಪಾಲಿ ನಾಯ್ಕ ದೂರಿದರು.
ಕೂಡಲೇ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಆಸ್ಪತ್ರೆ ಉದ್ಘಾಟನೆಗೆ ವಿರೋಧ ಮತ್ತು ಮೂಲಸೌಕರ್ಯದ ಕೊರತೆ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಲು ಈಗಿನ ಸರ್ಕಾರ ಮುಂದಾಗುತ್ತಿದೆ. ಆದರೆ, ಆಸ್ಪತ್ರೆಗೆ ಅಗತ್ಯವಾದ ಎಂಆರ್‌ಐ ಸ್ಕ್ಯಾನಿಂಗ್ ಸೇರಿದಂತೆ ಪ್ರಮುಖ ಉಪಕರಣಗಳಿಗೆ ಮೀಸಲಿಟ್ಟಿದ್ದ 30 ಕೋಟಿ ರೂ. ಅನುದಾನವನ್ನು ಮೊದಲು ಬಿಡುಗಡೆ ಮಾಡಬೇಕು. ಮೂಲಸೌಕರ್ಯವಿಲ್ಲದೆ ಕೇವಲ ಕಟ್ಟಡ ಉದ್ಘಾಟನೆ ಮಾಡಲು ಬಂದರೆ ತೀವ್ರ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ, ರಸ್ತೆಗಳ ದುಸ್ಥಿತಿ ಮತ್ತು ಸಾರಿಗೆ ಬಸ್‌ಗಳ ಅವ್ಯವಸ್ಥೆಯ ಬಗ್ಗೆಯೂ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಹರಿಹಾಯ್ದರು. ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ್, ಪ್ರಮುಖರಾದ ಸೂರಜ್ ನಾಯ್ಕ, ಜಗದೀಶ ನಾಯ್ಕ ಮೊಗಟಾ, ಸುಭಾಷ್ ಗುನಗಿ, ಸಂಜಯ ಸಾಳುಂಕೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 