ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
BJP protests against arrest of CT Ravi
ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೊಪ್ಪಳ 20: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ನಾಯಕರಿಗೆ ದಿಕ್ಕಾರ, ಪ್ರಜಾಪ್ರಭುತ್ವ ಕಗ್ಗೋಲೆ ಮಾಡುತ್ತಿರುವ ಕಾಂಗ್ರೆಸ್ ಗೂಂಡಾಗಳಿಗೆ ದಿಕ್ಕಾರ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ, ಗಂಗಾವತಿ ಶಾಸಕ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ, ಚಂದ್ರಶೇಖರ ಕವಲೂರು, ರಾಜು ಬಾಕಳೆ, ಪ್ರದೀಪ ಹಿಟ್ನಾಳ, ರಮೇಶ ಕವಲೂರು, ಮಹಾಲಕ್ಷ್ಮಿ ಕಂದಾರಿ, ಮಹೇಶ ಅಂಗಡಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 