ಬಿ.ಎಲ್.ಡಿ.ಇ ಮಹಿಳಾ ಬ್ಯಾಡ್ಮಿಂಟನ್ ತಂಡ ರನ್ನರ್ ಅಪ್ ಸ್ಥಾನ
BLDE women's badminton team runner-up
ವಿಜಯಪುರ 01 : ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಮಹಿಳಾ ಬ್ಯಾಡ್ಮಿಂಟನ್ ತಂಡ ಮಂಗಳೂರಿನಲ್ಲಿ ನಡೆದ 14ನೇ ನಿಟ್ಟೆ ಎಕ್ಲೋಡ್ಸ್ ದಕ್ಷಿಣ ಭಾರತ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ರನ್ನರ್ ಅಪ್ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದೆ. ಫೆಬ್ರವರಿ 24 ರಿಂದ 27ರ ವರೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ಆಯೋಜಿಸಿದ್ದ ಈ ಕ್ರೀಡಾಕೂಟದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಮಹಿಳಾ ಬ್ಯಾಡ್ಮಿಂಟನ್ ತಂಡದ 29 ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು. ಈ ತಂಡದ ಸದಸ್ಯರಾದ ತನುಶ್ರೀ ಪಾಟೀಲ, ಸುಭಾಗಾ ಪಿ.ಎನ್., ಮತ್ತು ಶ್ರೀನಿತ್ಯ ಅವರು ಅತ್ಯುತ್ತಮ ಪ್ರದರ್ಶನ ತೋರಿಸ ತಂಡ ದ್ವಿತೀಯ ಸ್ಥಾನ ಪಡೆಯಲು ಕಾರಣರಾಗಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ.ಆರ್.ವಿ.ಕುಲಕರ್ಣಿ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವಿದ್ಯಾರ್ಥಿ ಕಲ್ಯಾಣ ಮತ್ತು ಕ್ರೀಡೆ ವಿಭಾಗದ ಡೀನ್ ಡಾ. ಗೀರೀಶ ಕುಲ್ಲೊಳ್ಳಿ ಮತ್ತು ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 