ಬಾಬು ಜಗಜೀವನರಾಮ್ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ

Babu Jagjivanram Jayanti: Decision for meaningful celebration

ಬಾಬು ಜಗಜೀವನರಾಮ್ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ  

ತಾಳಿಕೋಟಿ 27: ಭಾರತದ ಮಾಜಿ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮವನ್ನು ಎಪ್ರೀಲ 5 ರಂದು ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.  ಗುರುವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಜಯಂತಿ ಅಂಗವಾಗಿ ಹಮ್ಮಿಕೊಂಡ ಅಧಿಕಾರಿಗಳ ಹಾಗೂ ಸಮಾಜ ಬಾಂಧವರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ತಾಪಂ ಇಒ ನಿಂಗಪ್ಪ ಮಸಳಿ ಮಾತನಾಡಿ ಮಹಾಪುರುಷರ, ರಾಷ್ಟ್ರ ನಾಯಕರ ಜಯಂತಿ ಆಚರಣೆಯಲ್ಲಿ ಯಾವುದೇ ರೀತಿಯ ಲೋಪಗಳು ಆಗದಂತೆ ನೋಡಿಕೊಳ್ಳಬೇಕು. ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಶಿಸ್ತುಬದ್ಧವಾಗಿ ಕಾರ್ಯರೂಪದಲ್ಲಿ ತರಲು ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ ಏಪ್ರಿಲ್ 5ರಂದು ನಡೆಯಲಿರುವ ಈ ಜಯಂತಿಯಲ್ಲಿ ಅಂದು ಬೆಳಿಗ್ಗೆ ಎಂಟು ಗಂಟೆಗೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಗುವುದು ನಂತರ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವುದು, ಇದರಲ್ಲಿ ಬಾಬು ಜಗಜೀವನ ರಾಮ್ ಅವರ ಜೀವನ ಕುರಿತು ವಿಶೇಷ ಉಪನ್ಯಾಸ ನಡೆಯುವುದು ಹಾಗೂ ಇದೇ ಸಂದರ್ಭದಲ್ಲಿ 2024 -25ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.  ಪೂರ್ವಭಾವಿ ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ,ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಬಿ.ಜಿ.ಮಠ,ಸಿ ಆರಿ​‍್ಸ.ರಾಜು ವಿಜಾಪುರ,ಸಿರಸ್ತೆದಾರ ಜೆ.ಆರ್‌.ಜೈನಾಪೂರ, ಮಾಜಿ ಉಪತಹಸಿಲ್ದಾರ ಜಿ.ಜಿ.ಮದರಕಲ್ಲ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್‌.ಬಿ. ಕಟ್ಟಿಮನಿ, ಪುರಸಭೆ ಮಾಜಿ ಸದಸ್ಯ ಇಬ್ರಾಹಿಂ ಮನ್ಸೂರ, ಸಮಾಜದ ಗಣ್ಯರಾದ ದೇವೇಂದ್ರ ಹಾದಿಮನಿ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರದೇನಾಳ, ಗೋಪಾಲ ಕಟ್ಟಿಮನಿ, ನಾಗೇಶ ಕಟ್ಟಿಮನಿ, ರಾಘು ವಿಜಾಪುರ, ಕಾಶಿನಾಥ ಮಬ್ರುಮಕರ್, ನಿಲಯ ಪಾಲಕರಾದ ಎಸ್‌.ಎಂ. ಕಲಬುರ್ಗಿ,ಎನ್‌.ವಿ.ಕೋರಿ,ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.