ಮಾತೃಪೂರ್ಣ ಯೋಜನೆ ಅನುಷ್ಠಾನದಲ್ಲಿ ಬಾಗಲಕೋಟೆ ಪ್ರಥಮ

ಬಾಗಲಕೋಟೆ: ಗರ್ಭಿಣಿ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಪೌಷ್ಠಿಕ ಊಟವನ್ನು ನೀಡುವದರ ಜೊತೆಗೆ ಕಬ್ಬಿಣಾಂಶ ಮಾತ್ರೆಗಳನ್ನು ವಿತರಿಸುವ ಮಾತೃಪೂರ್ಣ ಯೋಜನೆಯ ಅನುಷ್ಠಾನದಲ್ಲಿ ರಾಜ್ಯಕ್ಕೆ ಬಾಗಲಕೋಟೆ ಮೊದಲ ಸ್ಥಾನದಲ್ಲಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮಾತೃಪೂರ್ಣ ಯೋಜನೆಯ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ 2018-19ನೇ ಸಾಲಿನಲ್ಲಿ ಶೇ.92 ರಷ್ಟು ಯೋಜನೆ ಅನುಷ್ಠಾನಗೊಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡದುಕೊಂಡಿದೆ. ದ್ವಿತೀಯ ಸ್ಥಾನವನ್ನು ರಾಯಚೂರು ಜಿಲ್ಲೆ ಪಡೆದುಕೊಂಡಿದೆ. ಮಾತೃಪೂರ್ಣ ಯೋಜನೆಯ ಅನುಷ್ಠಾನದಲ್ಲಿ ಕಳೆದ 5 ತಿಂಗಳಿನಿಂದಲೂ ಸಹ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಮಾತೃಪೂರ್ಣ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಸಿಬ್ಬಂದಿಗಳನ್ನು ನೇಮಿಸಿ ಫಲಾನುಭವಿಗಳಿಗೆ ನೇರವಾಗಿ ದೂರವಾಣಿ ಕರೆ ಮಾಡುವ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಮಧ್ಯಾಹ್ನ ಊಟದ ಬಗ್ಗೆ ಪರಿಶೀಲಿಸಿ ಸರಿಯಾಗಿ ಊಟ ನೀಡದ ಕೇಂದ್ರಗಳ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊತ್ತಿರುವ ಹಿನ್ನಲೆಯಲ್ಲಿ ಮಾತೃಪೂರ್ಣ ಯೋಜನೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಒಟ್ಟು 2221 ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ ಒಟ್ಟು 44713 ಫಲಾನುಭವಿಗಳ ಪೈಕಿ 41122 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಅದರಲ್ಲಿ ಗಭರ್ಿಣಿಯರು 18987, ಬಾಣಂತಿಯರು 17860, ಅಂಗನವಾಡಿ ಕಾರ್ಯಕತರ್ೆಯರು 2185, ಸಹಾಯಕಿಯರು 2090 ಫಲಾನುಭವಿಗಳು ಇದ್ದಾರೆ. ಈ ಯೋಜನೆಯಲ್ಲಿ ಅಂಗವಾಡಿ ಕಾರ್ಯಕತರ್ೆಯರು ಹಾಗೂ ಸಹಾಯಕಿಯರು ಸಹ ಫಲಾನುಭವಿಗಳಾಗಿರುತ್ತಾರೆ ಎಂದು ತಿಳಿಸಿದರು. 

ಮಾತೃಪೂರ್ಣ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ 2221 ಪಾಠೋಪಕರಣ, ತೂಕದ ಯಂತ್ರಗಳು, 1818 ಎರಡು ಬರ್ನರ್ ಗ್ಯಾಸ್ ಸ್ಟೌವ್ ಹಾಗೂ 2221 ಕುಕ್ಕರಗಳನ್ನು ಖರೀದಿಸಲಾಗಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಆರೋಗ್ಯ, ಗ್ರಾಮೀಣ ಅಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮಹತ್ವದ ಪಾತ್ರ ವಹಿಸಿದ್ದಾರೆ. ಅಲ್ಲದೇ ಮಾತೃಪೂರ್ಣ ಯೋಜನೆಗಾಗಿಯೇ ಜಿಲ್ಲಾ ಮಟ್ಟದಲ್ಲಿ ವಾಟ್ಸ್ಪ್ ಗ್ರುಪ್ ಮಾಡಲಾಗಿದ್ದು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶೀಲಿಸಿ ಚೆಕ್ಲಿಸ್ಟ ಪಡೆಯಲಾಗುತ್ತಿದೆ. ಇದರಿಂದ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯವಾಯಿತು ಎಂದು ತಿಳಿಸಿದರು. 

ಅಂಗನವಾಡಿ ಕೇಂದ್ರಗಳಿಂದ 5 ರಿಂದ 6 ಕಿಮೀ ದೂರದಲ್ಲಿರುವ ಫಲಾನುಭವಿಗಳಿಗೆ ಮನೆಗೆ ಆಹಾರವನ್ನು ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ 224 ತೋಟದ ಅಂಗನವಾಡಿ ಕೇಂದ್ರಗಳಿದ್ದು, ಮಾತೃಪೂರ್ಣ ಫಲಾನುಭವಿಗಳಿಗೆ ಬಿಸಿ ಊಟ ತಯಾರಿಸಿ ಮನೆಗಳಿಗೆ ನೀಡಲಾಗುತ್ತಿದೆ. ಗಭರ್ಾವಸ್ಥೆಯ ಕೊನೆಯ 1 ತಿಂಗಳು ಹಾಗೂ ಬಾಣಂತಿಯರಿಗೆ 45 ದಿನಗಳ ವರೆಗೆ ಉಪಹಾರ ತಯಾರಿಸಿ ಮನೆಗೆ ಕಳುಹಿಸಲಾಗುತ್ತಿದೆ. ಅಲ್ಲದೇ ಫಲಾನುಭವಿಗಳ ಹಾಜರಾಗಿ ಹೆಚ್ಚಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಇಳಿಕೆ :

ಬಾಗಲಕೋಟೆ ಜಿಲ್ಲೆಯಲ್ಲಿ 2011ರ ಸೆನ್ಸೆಸ್ ಪ್ರಕಾರ ಪುರುಷ ಮತ್ತು ಮಹಿಳೆಯರ ನಡುವಿನ ವ್ಯತ್ಯಾಸವನ್ನು ಅವಲೋಕಿಸಿದಾಗ ಸಾವಿರಕ್ಕೆ 935 ಇತ್ತು. ಆದರೆ ಕಳೆದ 2018-19ನೇ ಸಾಲಿನಲ್ಲಿ ಲಿಂಗಾನುಪಾತ ವ್ಯತ್ಯಾಸದಲ್ಲಿ ಸಾವಿರಕ್ಕೆ 952 ಕಂಡುಬಂದಿದೆ. ಜಿಲ್ಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ.  

ದೇಶಾದ್ಯಂತ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಪೋಷಣೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಈ ಯೋಜನೆಯ ಉದ್ದೇಶವಾಗಿದ್ದು, ಹೆಣ್ಣು ಮಕ್ಕಳ ಲಿಂಗ ಅನುಪಾತವು ಸಮತೋಲನಗೊಳಿಸಲು ಈ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಅಂಗನವಾಡಿ ಕೇಂದ್ರಗಳಲ್ಲಿ ಹೆಣ್ಣು ಮಕ್ಕಳ ಹುಟ್ಟುಹಬ್ಬ, ಹೆಣ್ಣು ಮಗುವಿನ ಪಾಲಕರಿಗೆ ಸನ್ಮಾನ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ, ಸಸಿ ನೆಡುವ ಕಾರ್ಯಕ್ರಮ, ಸಾಧನೆಗೈದ ಹೆಣ್ಣು ಮಕ್ಕಳಿಗೆ ಸನ್ಮಾನ, ಫ್ಯಾಶನ್ ಶೋ, ಜಾಥಾ, ಬೇಬಿ ಶೋ, ಜನ್ಮೋತ್ಸವ, ಸೀಮಂತ ಸೇರಿದಂತೆ ಇತರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಯೋಜನೆ ಅನುಷ್ಠಾನಕ್ಕೆ ಬಿಡುಗಡೆಯಾದ ರೂ.23,90,500 ಅನುದಾನದಲ್ಲಿ 17,95,950 ರೂಗಳ ಅನುದಾನವನ್ನು ಖಚರ್ು ಮಾಡಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ಮಾತೃವಂದನಾ ಯೋಜನೆ :

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಸಹಾ ಮಾತೃಪೂರ್ಣ ಯೋಜನೆಯ ಫಲಾನುಭವಿಗಳಿಗೆ ಮೊದಲನೆ ಗಭರ್ಿಣಿ ತಾಯಂದಿಯರಿಗೆ ಹೆರಿಗೆಯ ಮೊದಲು ಹಾಗೂ ನಂತರದ ವಿಶ್ರಾಂತಿಗಳಾಗಿ ಹಾಗೂ ಆಥರ್ಿಕ ಸಹಾಯಧನದ ರೂಪದಲ್ಲಿ 3 ಹಂತಗಳಲ್ಲಿ 5 ಸಾವಿರ ರೂ. ನೀಡಲಾಗುತ್ತಿದ್ದು, 2018-19ನೇ ಸಾಲಿನಲ್ಲಿ ಒಟ್ಟು ನೊಂದಣಿಯಾದ 11,182 ಫಲಾನುಭವಿಗಳಿಗೆ ಮೂರು ಕಂತುಗಳಲ್ಲಿ ಒಟ್ಟು 44,258,000 ರೂಗಳನ್ನು ನೀಡಲಾಗಿದೆ ಎಂದು ಸಭೆಗ ತಿಳಿಸಲಾಯಿತು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ  ಎ.ಕೆ.ಬಸಣ್ಣವರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ ಸೇರಿದಂತೆ ಆಯಾ ತಾಲೂಕಾ ಶಿಶು ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.