ಬಾಗಲಕೋಟೆ 17: ಜಿಲ್ಲೆಯಲ್ಲಿ ಜೂನ್ 21 ರಿಂದ 28 ವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಗಳು ಇರುವದರಿಂದ ಯಾವುದೇ ರೀತಿಯಲ್ಲಿ ನಕಲಿಗೆ ಅವಕಾಶ ನೀಡಬಾರದು. ನಕಲು ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ಧಾರ್ ಕ್ಷಣ್ಯವಾಗಿ ಕ್ರಮಕೈಗೊಳ್ಳಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಸೂಸುತ್ರವಾಗಿ, ಕಾನೂನಾತ್ಮಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7197 ವಿದ್ಯಾಥರ್ಿಗಳು ಪರೀಕ್ಷೆ ಬರೆಯಲಿದ್ದಾರೆ. ಬದಾಮಿ 3, ಬಾಗಲಕೋಟೆ 4, ಬೀಳಗಿ 3, ಹುನಗುಂದ 2, ಜಮಖಂಡಿ 6 ಹಾಗೂ ಮುಧೋಳದಲ್ಲಿ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 9.30 ರಿಂದ ಪ್ರಾರಂಭವಾಗುತ್ತಿದ್ದು, 9.45 ರ ನಂತರ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾಥರ್ಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರವೇಶವಿರುವದಿಲ್ಲ ಎಂದು ತಿಳಿಸಿದರು. ಪ್ರತಿಯೊಂದು ವಿದ್ಯಾಥರ್ಿಗಳಿಗೆ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ತಿಳಿಸಿದರು.
ಒಟ್ಟು 22 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಕೇಂದ್ರದ ಮುಖ್ಯ ಅಧೀಕ್ಷಕರಾಗಿದ್ದು, ತಮಗೆ ನೀಡಿರುವ ಕರ್ತವ್ಯಗಳನ್ನು ಪಾಲಿಸಿ ಯಾವುದೇ ತರಹದ ಲೋಪ ಕಂಡು ಬರದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚಿಸಿದರು. ನಕಲು ರಹಿತ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಜಾಗೃತ ದಳ ಹಾಗೂ ಜಿಲ್ಲಾ ಮಟ್ಟದ ಜಾಗೃತ ದಳವನ್ನು ನೇಮಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳ ವರಾಂಡ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ಹೊರತುಪಡಿಸಿ ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಸಿಬ್ಬಂದಿಗಳು ಪರೀಕ್ಷಾ ಅವಧಿಯಲ್ಲಿ ಮೊಬೈಲ್ ಬಳಸುವಂತಿಲ್ಲ. ಮಾರ್ಗಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ತಲುಪಿಸುವ ವ್ಯವಸ್ಥೆಯಾಗಬೇಕು. ಪಾರದರ್ಶಕವಾಗಿ ಪರೀಕ್ಷೆ ನಡೆಸುವ ದೃಷ್ಠಿಯಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಸುತ್ತ ಸಾರ್ವಜನಿಕರ ನಿಷೇದ, ಝರಾಕ್ಸ ಸೆಂಟರ ಮುಚ್ಚಲು 144 ಕಲಂ ಜಾರಿ ಹಾಗೂ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್.ಗೋನಾಳ ಪರೀಕ್ಷಾ ಸಿದ್ಧತೆ ಕುರಿತು ಸಭೆಗೆ ವಿವರವಾಗಿ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಉಪವಿಭಾಗಾಧಿಕಾರಿ ಎಚ್.ಜಯಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶೀಧರ ಪೂಜಾರಿ, ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿ ಬನ್ನಿದಿನ್ನಿ, ಪರೀಕ್ಷಾ ನೋಡಲ್ ಅಧಿಕಾರಿ ಪೋಲೇಶ ಸೇರಿದಂತೆ ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪೊಲೀಸ್ ಇಲಾಖೆಯವರು ಉಪಸ್ಥಿತರಿದ್ದರು.