ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ
Balle Mallikarjuna elected as Karnataka Rakshana Vedike Taluk President
ಕಂಪ್ಲಿ 27: ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಕಂಪ್ಲಿ ತಾಲೂಕು ನೂತನ ಅಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ ನೇಮಕಗೊಂಡಿದ್ದಾರೆ. ನಾಡು, ನುಡಿ, ನೆಲ, ಜಲ, ರೈತ ಕಾರ್ಮಿಕ ಸೇರಿದಂತೆ ಜನಪರ ಸಂಘಟನೆಗಳಲ್ಲಿ ಅಪಾರ ಕಾಳಜಿ ಉಳ್ಳವರಾಗಿರುವ ಜೊತೆಗೆ ಸಂಘಟನಾ ಸಾಮರ್ಥ್ಯವಿರುವ ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಾಹಿಸುತ್ತಾ, ಕನ್ನಡಪರ ಸೇವೆ ಸಲ್ಲಿಸಿರುವುದನ್ನು ಗುರುತಿಸಿ, ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರ(ಯಲ್ಲಮ್ಮಕ್ಯಾಂಪ್) ಗ್ರಾಮದ ನಿವಾಸಿ ಬಳೇ ಮಲ್ಲಿಕಾರ್ಜುನ ಇವರನ್ನು, ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ್ರು ಇವರ ಮಾರ್ಗದರ್ಶನದ ಮೇರೆಗೆ ಹಾಗೂ ರಾಜ್ಯ ಉಪಾಧ್ಯಕ್ಷ ಚಾನಾಳ್ ಶೇಖರ್ ಇವರ ಸೂಚನೆಯ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಅಂಗಡಿ ಶಂಕ್ರ್ಪ ಆದೇಶ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಂಪ್ಲಿ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ತಾಲೂಕಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಕಂಪ್ಲಿ ತಾಲೂಕು ಅಧ್ಯಕ್ಷ ಸ್ಥಾನ ನೀಡಿದ್ದು, ಸಂತಸದ ಜೊತೆಗೆ ಇನ್ನಷ್ಟು ಸೇವೆಗೆ ಅವಕಾಶ ಮಾಡಿಕೊಟ್ಟಿದ್ದು, ಜಿಲ್ಲಾ ಪದಾಧಿಕಾರಿಗಳ, ಸ್ಥಳೀಯ ಹಾಗೂ ಮುಖಂಡರ, ಪದಾಧಿಕಾರಿಗಳ ಸಹಕಾರದೊಂದಿಗೆ ನಮ್ಮ ಕನ್ನಡ ನಾಡು, ನುಡಿ, ಜಲ ಸಂರಕ್ಷಣೆಗೆ ಬದ್ಧವಾಗಿ ದುಡಿಯುತ್ತೇನೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 