ಕಾಂಗ್ರೆಸ್ ಸರ್ಕಾರದಿಂದ ಬಂಜಾರ ಸಮಾಜ 'ಟಾರ್ಗೆಟ್'
Banjara community 'targeted' by Congress government
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮಾಜವನ್ನೇ 'ಟಾರ್ಗೆಟ್' ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ."ಜಯೇಂದ್ರ ಅವರು ದೂರಿದ್ದಾರೆ.
ಬಂಜಾರ ಸಮಾಜವು ಬಿಜೆಪಿ ಜತೆ ಗಟ್ಟಿಯಾಗಿ ನಿಂತಿರುವ ಕಾರಣ ಕಾಂಗ್ರೆಸ್ಗೆ ಸ"ಸಲು ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಬಂಜಾರ ಸಮಾಜಕ್ಕೆ ಅನ್ಯಾಯವಾಗಿದೆ ಮತ್ತು ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂಜಾರ ಸಮುದಾಯದ ಕಾರ್ಯಕ್ರಮಕ್ಕೆ ಬಂದಾಗ ಸಹಜವಾಗಿ ಆ ಸಮಾಜದ ಯುವಕರು ಘೇರಾವ್ ಮಾಡಿ ಪ್ರತಿಭಟನೆ ನಡೆಸಿದ್ದರು. ಇದನ್ನು ಸ"ಸದ ಶಿವಕುಮಾರ್ ಓಡಿ ಹೋಗುವುದರ ಜತೆಗೆ ಘೋಷಣೆ ಕೂಗಿದ ಯುವಕರ ಮೇಲೆ ಎಫ್ಐಆರ್ ಹಾಕಿದ್ದಾರೆ ಎಂದು "ಜಯೇಂದ್ರ ಹೇಳಿದರು.
ಶಾಸಕ ಚಂದ್ರ ಲಮಾಣಿ ಅವರನ್ನೂ ಟಾರ್ಗೆಟ್ ಮಾಡಲಾಗಿದೆ. ಅವರು ಕೋರ್ಟ್ನಲ್ಲಿ "ಚಾರಣೆ ಎದುರಿಸುತ್ತಿದ್ದಾರೆ. ಈಗಾಗಲೇ ಅನೇಕ ಆಡಿಯೊಗಳು ಹೊರಬಂದಿವೆ. ಅದರ ಸತ್ಯಾಸತ್ಯತೆ ಹೊರಬರಬೇಕಿದೆ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುಖ್ಯಮಂತ್ರಿ ಮತ್ತುಉಪಮುಖ್ಯಮಂತ್ರಿಯವರ ಭ್ರಷ್ಟಾಚಾರದ ಕುರಿತು ಮಾತನಾಡುವ ಯೋಗ್ಯತೆ ಇದೆಯಾ? ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ವಾಲ್ಮೀಕಿ ಹಗರಣ, ಮುಡಾ ಹಗರಣ ನಡೆದಿದೆ. ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿಕೊಂಡಿಲ್ಲವೇ? ಪ್ರಿಯಾಂಕ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ. ಭ್ರಷ್ಟಾಚಾರಕ್ಕೆ
ಜಾತಿ ಲೇಪನ ಹಚ್ಚುವುದಿಲ್ಲ. ಸತ್ಯಾಸತ್ಯತೆ
ಹೊರಗೆ ಬರಲಿ, ತನಿಖೆ ನಡೆಯಲಿ ಎಂದು "ಜಯೇಂದ್ರ ಹೇಳಿದರು.
ಸಿದ್ದರಾಮಯ್ಯ ಅವರಿಗೆ ಬಿಜೆಪಿ ಮೇಲೆ ಸಿಟ್ಟು ಇಲ್ಲ. ಆದರೆ ಅವರಿಗೆ ಅವರ ಪಕ್ಷದಲ್ಲಿರುವವರ ಮೇಲೆಯೇ ಕೋಪ"ದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿುಸಿದರು. ಕುರಿ ಕಾಯುತ್ತಿದ್ದ ತಾವು ಮುಖ್ಯಮಂತ್ರಿ ಆಗಿದ್ದಕ್ಕೆ ಕೆಲವರಿಗೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆ ಬಗ್ಗೆ ನಮಗೆ ಸಂತೋಷ"ದೆ. "ಗಾಗಿ ಅವರು ಈ ಬಜೆಟ್ನಲ್ಲಾದರೂ "ಂದುಳಿದ ವರ್ಗಗಳ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾುಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 