ಖೋ-ಖೋ ಕ್ರೀಡೆಯಲ್ಲಿ ಬಸಮ್ಮ ಜಗ್ಗಲ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ
Basamma Jaggala selected as University Blue in Kho-Kho sport
ಗದಗ 13: ಕೆ.ಎಲ್.ಇ. ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ,ಗದಗದ ವಿದ್ಯಾರ್ಥಿನಿ ಕುಮಾರಿ ಬಸಮ್ಮ ಜಗ್ಗಲ ಅವರು ಮಹಿಳೆಯರ ಖೋ-ಖೋ ತಂಡದ ಕ್ರೀಡೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಬ್ಲೂ (ಗಟಿತಜಢಿಣಥಿ ಃಟಣಜ)ಆಗಿ ಆಯ್ಕೆಯಾಗಿರುವುದು ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದೆ.
ಕುಮಾರಿ ಬಸಮ್ಮ ಜಗ್ಗಲ ಅವರು ತಮ್ಮ ಕಠಿಣ ಪರಿಶ್ರಮ, ನಿಯಮಿತ ಅಭ್ಯಾಸ ಮತ್ತು ದೃಢ ಮನೋಭಾವದ ಮೂಲಕ ಈ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಮಹಿಳೆಯರ ಖೋ-ಖೋ ಕ್ರೀಡೆಯಲ್ಲಿ ಅವರ ಸಾಧನೆ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆಯಾಗಿದ್ದು,ಮಹಾವಿದ್ಯಾಲಯದ ಕ್ರೀಡಾ ಸಾಧನೆಗಳಿಗೆ ಮತ್ತೊಂದು ಕೀರೀಟವಾಗಿಯೂ ಪರಿಣಮಿಸಿದೆ.
ಈ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ. ಕೆ. ಮಠ ಅವರು ಬಸಮ್ಮ ಜಗ್ಗಲರನ್ನು ಅಭಿನಂದಿಸಿ,“ಕ್ರೀಡೆ ಮತ್ತು ಶಿಕ್ಷಣ ಎರಡನ್ನೂ ಸಮನ್ವಯಗೊಳಿಸಿ ಸಾಧನೆ ಮಾಡಿರುವುದು ಶ್ಲಾಘನೀಯ. ಇಂತಹ ವಿದ್ಯಾರ್ಥಿಗಳು ಮಹಾವಿದ್ಯಾಲಯದ ಗೌರವವನ್ನು ಹೆಚ್ಚಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯವರು ಕೂಡ ವಿದ್ಯಾರ್ಥಿನಿಯನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ, ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿಯೂ ಸಾಧನೆ ಮಾಡುವಂತೆ ಶುಭಹಾರೈಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೀರಣ್ಣ ಬಡಿಗೇರ ಅವರು ವಿದ್ಯಾರ್ಥಿನಿಯ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮವೇ ಈ ಸಾಧನೆಯ ಮೂಲ ಕಾರಣವೆಂದು ತಿಳಿಸಿದ್ದಾರೆ.
ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಕುಮಾರಿ ಬಸಮ್ಮ ಜಗ್ಗಲ ಅವರ ಈ ಮಹತ್ವದ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆ ಇತರ ವಿದ್ಯಾರ್ಥಿಗಳಿಗೂ ಕ್ರೀಡಾ ಕ್ಷೇತ್ರದಲ್ಲಿ ಮುಂದುವರಿಯಲು ಸ್ಪೂರ್ತಿದಾಯಕವಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 