ಬಸವ ಜಯಂತಿ: ಪೂರ್ವಭಾವಿ ಸಭೆ
Basava Jayanti: Preparatory meeting
ಲೋಕದರ್ಶನ ವರದಿ
ಅದ್ಧೂರಿ ಹಾಗೂ ಅರ್ಥಪೂರ್ಣ ಜಯಂತಿಗೆ ಎಲ್ಲರೂ ಸಹಕರಿಸಿ: ಎಡಿಸಿ ಸಿದ್ರಾಮೇಶ್ವರ
ಕೊಪ್ಪಳ 08 : ಏಪ್ರಿಲ್ 20 ರಂದು ಆಚರಿಸಲಾಗುವ ಶ್ರೀ ಬಸವ ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು, ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡಲು ಎಲ್ಲರೂ ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಬುಧವಾರದಂದು ಶ್ರೀ ಬಸವ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ 8 ಗಂಟೆಗೆ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಹೂ-ಮಾಲೆಗಳನ್ನು ಹಾಕಿದ ನಂತರ 9 ಗಂಟೆಗೆ ಗಂಜ್ ಸರ್ಕಲ್‌ನಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರೆ್ಣ ಮಾಡಲಾಗುತ್ತದೆ. ನಂತರ ಸಂಜೆ 4 ಗಂಟೆಗೆ ಗಡಿಯಾರ ಕಂಬದ ಬಳಿ ಇರುವ ಮಹೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.
ವೇದಿಕೆ ಕಾರ್ಯಕ್ರಮ ಅಂದು ಸಂಜೆ 6 ಗಂಟೆಗೆ ಗವಿಮಠದ ತೇರು ಮೈದಾನದಲ್ಲಿ ನಡೆಯಲಿದೆ. ರಾಯಭಾಗ ತಾಲ್ಲೂಕಿನ ಹಾರೋಗೇರಿಯ ಶರಣ ಚಿಂತಕರು ಹಾಗೂ ಹಿರಿಯ ಸಾಹಿತಿಗಳಾದ ಡಾ.ವಿ.ಎಸ್.ಮಾಳಿ ಹಾಗೂ ಬೆಳಗಾವಿಯ ಶಿಕ್ಷಕಿ ಹಾಗೂ ಬಸವ ಚಿಂತಕರಾದ ಡಾ.ದಾನಮ್ಮ ಝಳಕಿ ಇವರು ಬಸವೇಶ್ವರ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು. ರಥದ ಸಿಂಗಾರ ಒಳ್ಳೆಯ ರೀತಿಯಲ್ಲಿ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸೇರಿದಂತೆ ಇತರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿಭಾಯಿಸಬೇಕು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಆಹಾರ ಇಲಾಖೆಯ ಉಪನಿರ್ದೇಶಕರಾದ ವಿಶ್ವನಾಥಗೌಡ ಎಂ.ಎನ್., ಡಿಸಿಎಫ್ ಕಚೇರಿಯ ಮಲ್ಲಿಕಾರ್ಜುನ ಗೌಡರ್, ಎಎಸ್‌ಐ ವೀರಭದ್ರ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಬಸವ ಸಮಾಜದ ಜಿಲ್ಲಾಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ, ಗವಿಸಿದ್ದಪ್ಪ, ಈಶ್ವರ್ಪ ತೋಟಪ್ಪ ದಿನ್ನಿ, ಸೇರಿದಂತೆ ಸಮಾಜದ ಇತರೆ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 