ಬಸವ ಜಯಂತಿ ಆಚರಣೆ

ಧಾರವಾಡ: ವಿಶ್ವಗುರು ಬಸವೇಶ್ವರರ ಜಯಂತಿಯನ್ನು ಇಂದು ಬೆಳಿಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ದೀಪಾ ಚೋಳನ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾಣರ್ೆ ಮಾಡಿ, ಪೂಜೆ ಸಲ್ಲಿಸಿದರು. ಧಾರವಾಡ ಬಸವಕೇಂದ್ರದ ಸದಸ್ಯರು ಬಸವಣ್ಣನವರ ವಚನಗಳನ್ನು ಪಠಿಸಿದರು. ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ.ಜಿ, ಅಪರಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದರ್ೇಶಕ ಗಜಾನನ ಮನ್ನಿಕೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು, ಬಸವ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಂಗಾಯಣ ಆಡಳಿತಾಧಿಕಾರಿ ಕೆ.ಎಚ್.ಚನ್ನೂರ ಕಾರ್ಯಕ್ರಮ ನಿರೂಪಿಸಿದರು. ಅಶ್ವಾರೂಡ ಬಸವಮೂತರ್ಿಗೆ ಮಾಲಾರ್ಪಣೆ: ಬಸವ ಪುತ್ತಳಿಗೆ ಮಾಲಾರ್ಪಣೆಃ ನಗರದ ಆಲೂರು ವೆಂಕಟರಾವ ವೃತದಲ್ಲಿ ಇರುವ ಅಶ್ವಾರೂಡ ಬಸವಣ್ಣನವರ ಪುತ್ತಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು.