ಬಸವಣ್ಣ ಮತ್ತು ನೀಲಮ್ಮ ದೇವಿ ಜೋಡಿ ರಥೋತ್ಸವ
Basavanna and Neelamma Devi Couple Chariot Festival
ಕಂಪ್ಲಿ 30.: ಪಟ್ಟಣದ ಆರಾಧ್ಯ ದೈವ ಇತಿಹಾಸ ಪ್ರಸಿದ್ಧ ಶ್ರೀ ಪೇಟೆ ಬಸವೇಶ್ವರ ಮತ್ತು ನೀಲಮ್ಮದೇವಿ ಜೋಡಿ ರಥೋತ್ಸವ ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪಂಚ ಕಳಶಗಳನ್ನು ಹೊತ್ತು ಅಲಂಕೃತಗೊಂಡಿದ್ದ ಬೃಹತ್ ಜೋಡಿ ರಥಗಳು ತೇರಿನ ಮನೆ ಬಳಿಯಿಂದ ಆರಂಭಗೊಂಡು, ಪಟ್ಟಣದ ಡಾ. ರಾಜ್‌ಕುಮಾರ ಮುಖ್ಯ ರಸ್ತೆ ಮೂಲಕ ಕೂಲಿಕಟ್ಟೆ ಬಸವೇಶ್ವರ, ರಾಮಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿದವು. ನೆರೆದಿದ್ದ ಸಾವಿರಾರು ಭಕ್ತರು ಎರಡು ತೇರುಗಳು ಸಾಗುವಾಗ ಉತ್ತತ್ತಿ ಎಸೆದು ಮನದ ಹರಕೆ ತೀರಿಸಿದ್ದು, ಈ ಬಾರಿ ಜಾತ್ರೆಯ ವಿಶೇಷವಾಗಿತ್ತು. ವಿವಿಧ ಕಲಾ ಪ್ರಕಾರಗಳು ಹಾಗೂ ಜನಪದ ವಾದ್ಯದವರು ರಥೋತ್ಸವದಲ್ಲಿ ಭಾಗವಹಿಸಿ ಕಲಾ ನೈಪುಣ್ಯತೆ ಮೆರೆದರು. ಶಾಸಕ ಜೆ.ಎನ್.ಗಣೇಶ ಇವರು ಜೋಡಿ ರಥೋತ್ಸವದಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾದ ನಂತರ ಮಾತನಾಡಿ,
ಕಂಪ್ಲಿ ಪಟ್ಟಣದ ಐತಿಹಾಸಿಕ ಪ್ರಸಿದ್ಧಿಗೊಂದಿದ ಪೇಟೆ ಬಸವೇಶ್ವರ ಹಾಗೂ ನೀಲಮ್ಮ ಜೋಡಿ ರಥೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಜರುಗಿತು. ನಾಡಿನಲ್ಲಿ ಒಳ್ಳೆಯ ಮಳೆ, ಬೆಳೆ ಸಮೃದ್ಧಿಯಾಗಿರಲಿ. ದೇವರ ಆರಾಧನೆಯಿಂದ ಭಕ್ತರ ಇಷ್ಟಾರ್ಥಗಳು ಲಭಿಸಲು ಸಾಧ್ಯ. ಈ ನಿಟ್ಟಿನಲ್ಲಿ ಸಾಕಷ್ಟು ಜನರು ಜೋಡಿ ರಥೋತ್ಸವದಲ್ಲಿ ಭಾಗವಹಿಸಿ, ದರ್ಶನ ಪಡೆದಿರುವುದು ಖುಷಿ ತಂದಿದೆ ಎಂದರು. ಕಂಪ್ಲಿ ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಜಾತ್ರೆಯ ಅಂಗವಾಗಿ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ಶ್ರದ್ಧೆ ಹಾಗೂ ಭಕ್ತಿಯಿಂದ ಜರುಗಿದವು. ಬೆಳಿಗ್ಗೆಯಿಂದಲೇ ಬಸವೇಶ್ವರ ಮತ್ತು ನೀಲಮ್ಮದೇವಿ ದರ್ಶನ ಪಡೆಯಲು ದೇವಸ್ಥಾನದಲ್ಲಿ ಭಕ್ತರು ಸಾಲುಗಟ್ಟಿ ನಿಂತು ಕಾಯಿ ಕರ್ೂರ ಮತ್ತು ಕಾಣಿಕೆ ಸಲ್ಲಿಸಿ ಮಂಗಳ ಆರತಿ ಪಡೆಯುತ್ತಿದ್ದ ದೃಶ್ಯ ಕಂಡು ಬಂತು. ಜಾತ್ರೆಯ ಹಿಂದಿನ ದಿನ ರಾತ್ರಿ ಚಳಿ ಲೆಕ್ಕಿಸದೆ ಹೂವಿನ ಅಡ್ಡಪಲ್ಲಕ್ಕಿ ಉತ್ಸವವನ್ನು ಭಕ್ತರೆಲ್ಲರೂ ಭಕ್ತಿ ಭಾವದಿಂದ ಆಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 