ಬಸವರಾಜ. ಕೆ. ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಪಿ.ಎಚ್‌ಡಿ. ಪದವಿ
Basavaraja. K. has a Ph.D. degree from Kannada University, Hampi.
ಹೊಸಪೇಟೆ 21: ಬಸವರಾಜ.ಕೆ ಮುಖ್ಯಗುರುಗಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 88-ಮುದ್ಲಾಪುರ ಹೊಸಪೇಟೆ ಇವರು ಡಾ.ಮೃತ್ಯುಂಜಯ ರುಮಾಲೆ ಇವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ ನವೋದಯ ಕಥನ ಕವನಗಳು ವಸ್ತು, ಆಶಯ, ಮತ್ತು ಆಕೃತಿ ಎಂಬ ವಿಷಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿದ ಪ್ರಯುಕ್ತ ಹಂಪಿಕನ್ನಡ ವಿಶ್ವವಿದ್ಯಾಲಯವು, ಪಿ.ಎಚ್‌ಡಿ. ಪದವಿ ಅರ್ಹವಾಗಿದೆ ಎಂದು ಅಧಿಸೂಚನೆ ಹೊರಡಿಸಿರುತ್ತದೆ. ಇವರಿಗೆ ದಿನಾಂಕ : 24.02.2026 ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಘನತವೆತ್ತ ರಾಜ್ಯಪಾಲರು, ಕುಲಪತಿಗಳು, ಕುಲಸಚಿವರು ಇವರುಗಳಿಂದ ಪಿ.ಎಚ್.ಡಿ. ಪದವಿ ಪ್ರದಾನ ಮಾಡಲಾಗುತ್ತದೆ. ಬಸವರಾಜ.ಕೆ ಇವರಿಗೆ ಶಿಕ್ಷಣ ಇಲಾಖೆ ಅಧಿಕಾರಿ ಹಾಗೂ ಶಿಕ್ಷಕ ವೃಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸ್ನೇಹಿತರು, ಹಿತೈಶಿಗಳು, ಅಭಿನಂದಿಸಿ, ಶುಭಹಾರೈಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 