ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ: ಐಜಿ ಚೇತನಸಿಂಗ್ ರಾಥೋರ
Be courteous to the public: IG Chetansingh Rathore
ಕಾಗವಾಡ, 27 : ರಾಜ್ಯದ ಗಡಿ ಠಾಣೆಯಾಗಿರುವ ಕಾಗವಾಡ ಪೊಲೀಸ್ ಠಾಣೆಯ ಸಿಬ್ಬಂದಿಗಳು ಠಾಣೆಗೆ ಆಗಮಿಸುವ ದೂರುದಾರರು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋರ ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಗುರುವಾರ ದಿ. 27 ರಂದು ಕಾಗವಾಡ ಪೊಲೀಸ್ ಠಾಣೆಗೆ ವಿಶೇಷ ತಪಾಸಣೆಗಾಗಿ ಆಗಮಿಸಿ, ಪೊಲೀಸ್ ಠಾಣೆಯನ್ನು ವೀಕ್ಷಣೆ ಮಾಡಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸಂವಾದ ಮಾಡುತ್ತ, ಖಡಕ್ ಸೂಚನೆ ನೀಡಿದರು. ಕಾಗವಾಡ ಪೊಲೀಸ್ ಠಾಣೆಯಲ್ಲಿ ಕಳೆದ 12 ವರ್ಷಗಳಿಂದ ಅಪರಾಧ ಮತ್ತು ಅಪಘಾತಗಳಲ್ಲಿ ಜಪ್ತಿ ಮಾಡಲಾಗಿರುವ ಸುಮಾರ 20 ಕ್ಕೂ ಹೆಚ್ಚು ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.
ಇಲಾಖೆ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದ ಅವರು, ಗಡಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೇ, ಜೊತೆಗೆ ಠಾಣೆಯಲ್ಲಿ ಜನಸ್ನೇಹಿ ವಾತಾವರಣ ನಿರ್ಮಾಣ ಮಾಡುವ ಮೂಲಕ ನೊಂದ ಜನರೊಂದಿಗೆ ಸೌಜನ್ಯತೆಯಿಂದ ವರ್ತಿಸಿ, ಅನಾವಶ್ಯಕವಾಗಿ ತೊಂದರೆ ನೀಡಬಾರದು ಎಂದು ಸೂಚಿಸಿದರು.
ಕಾಗವಾಡ ಠಾಣೆಗೆ ಸಿಬ್ಬಂದಿಯ ಕೊರತೆ ಮತ್ತು ವಸತಿ ಗೃಹಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಗವಾಡ ಠಾಣೆಗೆ 52 ಸಿಬ್ಬಂದಿಗಳ ಅವಶ್ಯಕತೆ ಇದ್ದು, ಸದ್ಯ 32 ಸಿಬ್ಬಂದಿಗಳು ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಇಲ್ಲಿ ಹೆದ್ದಾರಿ ಗಸ್ತು ವಾಹನದ ಅವಶ್ಯಕತೆ ಇದ್ದು, ಈ ಕುರಿತು ಇಲಾಖೆಯ ಗಮನಕ್ಕೆ ತಂದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನೂ ನಕಲಿ ಪತ್ರಕರ್ತರ ಹಾವಳಿ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ಅಂತವರ ಮೇಲೆ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಹೆಚ್ಚುವರಿ ಪೋಲಿಸ ವರಿಷ್ಠಾಧಿಕಾರಿ ರಾಮನಗೌಡ ಬಸರಗಿ, ಡಿವೈಎಸ್ಪಿ ಪ್ರಶಾಂತ ಮುನ್ನೋಳಿ, ಪಿಎಸ್‌ಐ ರಾಘವೇಂದ್ರ ಖೋತ, ಪಿಎಸ್‌ಐ ಅಪರಾಧ ರಫೀಕ ಆಳಂದ, ಎಎಸ್‌ಐಗಳಾದ ಎಲ್.ಎನ್. ಕುಂಭಾರೆ, ಬಿ.ಎಸ್. ಪೂಜಾರಿ ಸೇರಿದಂತೆ ಕಾಗವಾಡ ಪೋಲಿಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 