ಜೆಎಸ್ಡಬ್ಲ್ಯೂ ಟೌನ್ಶಿಪ್ನಲ್ಲಿ ಕರಡಿ ಸೆರೆ
Bear captured in JSW Township
ಬಳ್ಳಾರಿ 26: ಸಂಡೂರಿನ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಟೌನ್ಶಿಪ್ ನಲ್ಲಿ ಹಲವಾರು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಕರಡಿಯನ್ನು ಮಂಗಳವಾರ ಸೆರೆ ಹಿಡಿಯಲಾಗಿದೆ.ಬೆಂಗಳೂರಿನ ಮುಖ್ಯ ವನ್ಯಜೀವಿ ಪರಿಪಾಲಕರ ಅನುಮತಿ ಮೇರೆಗೆ ಬಳ್ಳಾರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಂಡೂರು ಪಶು ವೈದ್ಯಾಧಿಕಾರಿಗಳ ಸಮಕ್ಷಮದಲ್ಲಿ ಸೆರೆ ಹಿಡಿಯಲಾಗಿದೆ.ಬನ್ನೇರುಘಟ್ಟ ವನ್ಯಜೀವಿ ಕರಡಿ ರಕ್ಷಣಾ ಕೇಂದ್ರ ಸಹಕಾರದೊಂದಿಗೆ ಅರವಳಿಕೆ ನೀಡಿ ಜಿಪಿಎಸ್ ಆಧಾರಿತ ರೇಡಿಯೋ-ಕಾಲರ್ ಐಡಿ ಅಳವಡಿಸಿ ಬೆಂಗಳೂರಿನ ಮುಖ್ಯ ವನ್ಯಜೀವಿ ಪರಿಪಾಲಕರ ಅನುಮತಿ ಪಡೆದು ಸೂಕ್ತವಾದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ.ಕಾರ್ಯಾಚರಣೆಯನ್ನು ವಲಯ ಅರಣ್ಯಾಧಿಕಾರಿ, ಸಂಡೂರು ದಕ್ಷಿಣ ವಲಯ ಹಾಗೂ ಸಿಬ್ಬಂದಿಯವರು ಜೊತೆಗೂಡಿ ಕಾರ್ಯಗತಗೊಳಿಸಿದ್ದಾರೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ ಅವರು ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 