ಬೀರ್ಪ ಅಂಡಗಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ
Beerpa Andagi awarded Swami Vivekananda Sadbhavana Award
ಕೊಪ್ಪಳ 01: ಪ್ರಾಥಮಿಕ ಶಾಲಾ ಶಿಕ್ಷಕರು,ವಿಕಲಚೇತನ ನೌಕರರ ಸಂಘಧ ರಾಜ್ಯಾಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರ್ಪ ಅಂಡಗಿ ಚಿಲವಾಡಗಿ ಅವರಿಗೆ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಸದ್ಭಾವನಾ ಪ್ರಶಸ್ತಿಯನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ವ್ಹಿ.ಬಿ.ಸಿ.ಪ್ರೌಢ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು. ಈ ಸಮಯದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರಾದ ವೀಣಾ ಎಸ್ ಕಾಶಪ್ಪನವರ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವರಾದ ಶಂಕರಗೌಡ ಎಸ್ ಸೋಮನಾಳ,ಸಿದ್ದನಕೋಳದ ಡಾ.ಶಿವಕುಮಾರ ಮಹಾಸ್ವಾಮಿಗಳು,ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ, ಸಿದ್ದರಾಮೇಶ್ವರ ಸ್ವಾಮಿಗಳು,ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ.ಜಾನಪದ.ಎಸ್.ಬಾಲಾಜಿ,ಕಾರ್ಯದರ್ಶಿ ಸುರೇಶ ರೈ,ವಿಜಯಪುರ ಜಿಲ್ಲಾಧ್ಯಕ್ಷರಾದ ಪುಂಡಲೀಕ ಮುರಾಳ,ಅಹಿಳ್ಯಾ ದೇವಿ ಹೋಳ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಮದರಿ ಸೇರಿದಂತೆ ಅನೇಕರು ಹಾಜರಿದ್ದರು.ಪೋಟೊ: ಬೀರ್ಪ ಅಂಡಗಿ ಅವರಿಗೆ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.-
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 