ಬೆಳಗಾವಿ ಕಾಂಗ್ರೆಸ್ ಸಮಾವೇಶ 21ಕ್ಕೆ: ಯಶಸ್ವಿಗೆ ಶಾಸಕ ಬಸನಗೌಡ ದದ್ದಲ್ ಕರೆ

Belagavi Congress Convention 21: MLA Basanagowda Daddal calls for success

ಬೆಳಗಾವಿ ಕಾಂಗ್ರೆಸ್ ಸಮಾವೇಶ 21ಕ್ಕೆ: ಯಶಸ್ವಿಗೆ ಶಾಸಕ ಬಸನಗೌಡ ದದ್ದಲ್ ಕರೆ

ದೇವರಹಿಪ್ಪರಗಿ 16 : ಬೆಳಗಾವಿ ನಗರದಲ್ಲಿ ’ಮಹಾತ್ಮ ಗಾಂಧಿ ಅಧ್ಯಕ್ಷತೆಯ ಕಾಂಗ್ರೆಸ್ ಅಧಿವೇಶನ 100ವರ್ಷಗಳ ಪೂರ್ಣಗೊಂಡ ಹಿನ್ನೆಲೆ ಗಾಂಧಿ ಪ್ರತಿಮೆ ಅನಾವರಣ ಮತ್ತು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶವನ್ನು ಇದೇ 21ರಂದು ಬೆಳಗ್ಗೆ 10 ಗಂಟೆಗೆ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಕಾರ್ಯಕ್ರಮದ ಯಶಸ್ವಿಗೆ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕರೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಮಾವೇಶ ಡಿಸೆಂಬರ್ 27ರಂದು ನಡೆಯಬೇಕಿತ್ತು ಆದರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು ಹಾಗೂ ಸಮಾವೇಶದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜಿವಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು. 

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಡಾ ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರು ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಮಹಾತ್ಮ ಗಾಂಧಿಜೀ ಹಾಗೂ ಡಾ.ಬಿ.ಆರ್‌. ಅಂಬೇಡ್ಕರ್ ಅವರ ವಿಚಾರಧಾರೆ ಸಂದೇಶಗಳನ್ನು ದೇಶ ವ್ಯಾಪಿ ತಲುಪಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೂ ಹೆಮ್ಮೆಯ ವಿಷಯ, ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕಾಗಿದೆ ಎಂದು ಹೇಳಿದರು.ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರ ಸೇರಿದಂತೆ ಹಲವಾರು ಮುಖಂಡರು ಮಾತನಾಡಿ, ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಸೀರ ಅಹ್ಮದ್ ಬೇಪಾರಿ, ಬಾಳಾಸಾಹೇಬಗೌಡ ಪಾಟೀಲ,  ಮುಖಂಡರುಗಳಾದ ಸಂಗನಗೌಡ ಹರನಾಳ, ಸಂಗಮೇಶ ಛಾಯಗೋಳ, ಸಾಹೇಬಗೌಡ ಬಿರಾದಾರ, ಅಶೋಕಗೌಡ ಪಾಟೀಲ, ಮುನೀರ್ ಬಿಜಾಪುರ, ಪ್ರಕಾಶ ಗುಡಿಮನಿ, ರಾಜಕುಮಾರ ಸಿಂದಗಿರಿ, ಬೀರು ಹಳ್ಳಿ,ರಾಜಹ್ಮದ ಶಿರಸಿಗಿ, ರಾಜಪಟೇಲ, ರಜಾಕ್ ಚಿಕ್ಕರೂಗಿ, ಸರಿತಾ ನಾಯಕ, ಲಲಿತಾಬಾಯಿ ದೊಡಮನಿ, ಮುರ್ತುಜಾ ತಾಂಬೋಳಿ, ಪರಶುರಾಮ ದಿಂಡವಾರ, ರಹಿಮಾನ್ ಕನಕಲ್, ಸುನೀಲ ಕನಮಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ನಾಮ ನಿರ್ದೇಶಿತ ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.